ಬೆಂಗಳೂರು: ಮೈಸೂರಿನಲ್ಲಿ ಯುವತಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಸೆರೆಹಿಡಿದ ಪೊಲೀಸರಿಗೆ ನವರಸನಾಯಕ ಜಗ್ಗೇಶ್ 1 ಲಕ್ಷ. ರೂ. ಬಹುಮಾನ ಘೋಷಿಸಿದ್ದಾರೆ.
ಈ ಹಿಂದೆ ಹೈದರಾಬಾದ್ ನಲ್ಲಿ ದಿಶಾ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಹಿಡಿದ ಪೊಲೀಸರಿಗೂ ಜಗ್ಗೇಶ್ ನಗದು ಬಹುಮಾನ ನೀಡಿದ್ದರು.
ಇದೀಗ ಮೈಸೂರಿನ ಕಾಮುಕರನ್ನು ಸೆರೆಹಿಡಿದ ಪೊಲೀಸ್ ತಂಡಕ್ಕೆ 1 ಲಕ್ಷ ರೂ. ಬಹುಮಾನ ನೀಡುತ್ತಿರುವುದಾಗಿ ಘೋಷಿಸಿದ್ದಾರೆ. ಕಾಲೇಜು ವಿದ್ಯಾರ್ಥಿ ಅತ್ಯಾಚಾರ ಮಾಡಿದ ಕಾಮಪಿಪಾಸುಗಳ ಬಂಧಿಸಿದ ಕರುನಾಡಿನ ಹೆಮ್ಮೆಯ ಆರಕ್ಷಕರಿಗೆ ನನ್ನ ವೈಯಕ್ತಿಕ ಅಭಿನಂದನೆಗಳು. ನನ್ನ ಕಡೆಯಿಂದ ಪ್ರಕರಣ ಬೇಧಿಸಿದ ಪೊಲೀಸರಿಗೆ 1 ಲಕ್ಷ ರೂ. ಬಹುಮಾನ. ನಿಮ್ಮ ಸಾರ್ಥಕ ಸೇವೆ ಹೀಗೇ ಮುಂದುವರಿಯಲಿ ಎಂದು ಜಗ್ಗೇಶ್ ಅಭಿನಂದಿಸಿದ್ದಾರೆ.