Webdunia - Bharat's app for daily news and videos

Install App

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

Sampriya
ಶನಿವಾರ, 30 ಆಗಸ್ಟ್ 2025 (18:02 IST)
Photo Credit X
ಬೆಂಗಳೂರು: ತಮ್ಮ ತಾಯಿಯ ಹುಟ್ಟು ಹಬ್ಬವನ್ನು ನಟ ಕಿಚ್ಚ ಸುದೀಪ್‌ ಅವರು ವಿಶೇಷವಾಗಿ ಆಚರಿಸಿದ್ದಾರೆ. 

ಈಚೆಗಷ್ಟೇ ಅಗಲಿರುವ ಅಮ್ಮನ ನೆನಪು ಸದಾ ಉಳಿಯಲೆಂದು ಅವರು ಹಸಿರು ಕ್ರಾಂತಿಗೆ ಮುಂದಾಗಿದ್ದಾರೆ. ಅಮ್ಮನ ಹುಟ್ಟು ಹಬ್ಬದ ದಿನದಂದು ಕುಟುಂಬ ಸಮೇತ ಮರ ಬೆಳೆಸುವ ಸಂಕಲ್ಪವನ್ನು ಮಾಡಿದ್ದಾರೆ.

ಪ್ರತಿ ಮರಕ್ಕೂ ಒಂದು ಕಥೆ ಇದೆ. ಈ ಮರವು ನನ್ನ ಅಮ್ಮನ ಕಥೆ ಹೇಳಲಿ ಎಂದು ಭಾವುಕರಾಗಿ ಬರೆದುಕೊಂಡಿರುವ ಸುದೀಪ್, ಅಮ್ಮನ ಹುಟ್ಟು ಹಬ್ಬಕ್ಕೆ ಮರ ನೆಟ್ಟು ಭಾವುಕರಾಗಿದ್ದಾರೆ

ಇದೇ ಸೆಪ್ಟೆಂಬರ್ 2ಕ್ಕೆ ಸುದೀಪ್ ಕೂಡ ಹುಟ್ಟು ಹಬ್ಬವನ್ನು  ಆಚರಿಸಿಕೊಳ್ಳುತ್ತಿದ್ದು, ಅದು ಅಮ್ಮನು ಇಲ್ಲದ ಮೊದಲ ಹುಟ್ಟು ಹಬ್ಬ ಎಂದು ನುಡಿದಿದ್ದಾರೆ.

ಅಮ್ಮನ ಹೆಜ್ಜೆಗೆ ಹಸಿರು ಹೆಜ್ಜೆ ಅಭಿಯಾನದಡಿ ಸುದೀಪ್ ಗಿಡ ನೆಟ್ಟಿದ್ದು, ಈ ಅಭಿಯಾನ ನಿರಂತರವಾಗಿ ಇರಲಿದೆಯಂತೆ. ಈ ಅಭಿಯಾನಕ್ಕೆ ಸುದೀಪ್ ಸಹೋದರಿ ಮತ್ತು ಪತ್ನಿ ಕೂಡ ಸಾಥ್ ನೀಡಿದ್ದಾರೆ. ಎಲ್ಲರ ಅಮ್ಮನ ಹೆಸರಿನಲ್ಲಿ ಗಿಡ ನೆಟ್ಟು, ಅಮ್ಮನ ನೆನಪನ್ನು ಸದಾ ಹಸಿರಾಗಿ ಇರುವಂತೆ ನೋಡಿಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಕಿಚ್ಚ ಸುದೀಪ್ ಬರ್ತ್ ಡೇ ಹಿಂದಿನ ದಿನ ಇಲ್ಲಿ ಅಭಿಮಾನಿಗಳಿಗೆ ಸಿಗ್ತಾರೆ

ನಟ ದರ್ಶನ್ ಗೆ ಮುಂದೆ ಎಲ್ಲಿ ಜೈಲೂಟ, ಇಂದು ನಿರ್ಧಾರ

ಮೈಸೂರು ದಸರಾ ಆನೆ ಮಾವುತರ ಕುಟುಂಬಕ್ಕೆ ಕುಕ್ಕರ್ ಕೊಟ್ಟು ಊಟ ಹಾಕಿಸಿದ ವಿಜಯಲಕ್ಷ್ಮಿ ದರ್ಶನ್

ಟಾಕ್ಸಿಕ್ ಬಳಿಕ ಮತ್ತೊಂದು ಬಿಗ್ ಸ್ಟಾರ್ ಸಿನಿಮಾಗೆ ನಾಯಕಿಯಾದ ರುಕ್ಮಿಣಿ ವಸಂತ್

ಮುಂದಿನ ಸುದ್ದಿ
Show comments