Select Your Language

Notifications

webdunia
webdunia
webdunia
webdunia

ಕನ್ನಡ ಚಿತ್ರರಂಗಕ್ಕೆ ಇನ್ನೊಂದು ಶಾಕ್! ಅಂಕಲ್ ಲೋಕನಾಥ್ ಇನ್ನಿಲ್ಲ!

ಬೆಂಗಳೂರು , ಸೋಮವಾರ, 31 ಡಿಸೆಂಬರ್ 2018 (10:42 IST)
ಬೆಂಗಳೂರು: ವರ್ಷದ ಕೊನೆಯ ದಿನ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು ಹಿರಿಯ ನಟ ಲೋಕನಾಥ್ ನಿಧನದ ಸುದ್ದಿ ಕೇಳಿಬಂದಿದೆ.


ಈ ವರ್ಷ ಹಲವು ಕಲಾವಿದರನ್ನು ಕಳೆದುಕೊಂಡು ದುಃಖದಲ್ಲಿದ್ದ ಚಿತ್ರರಂಗಕ್ಕೆ ಲೋಕನಾಥ್ ಮೂಲಕ ಮತ್ತೊಂದು ಶಾಕ್ ಎದುರಾಗಿದೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.

ಸಂಸ್ಕಾರ ಅವರ ಮೊದಲ ಚಲನಚಿತ್ರವಾಗಿತ್ತು. ಬಳಿಕ ನಾಗರಹಾವು, ಭೂತಯ್ಯನ ಮಗ ಅಯ್ಯು, ಮಿಂಚಿನ ಓಟ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದರು. ಇಂದು ಮಧ್ಯಾಹ್ನ 12 ಗಂಟೆಯಿಂದ 2.30 ರವರೆಗೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಸತತ ಮೂರನೇ ವರ್ಷವೂ ವಿಷ್ಣುವರ್ಧನ್ ಸಮಾಧಿ ಬಳಿ ಬಾರದ ಕುಟುಂಬ