ದರ್ಶನ್ ಅಣ್ಣ ತೊಂದರೆ ಕೊಡುವವರಲ್ಲ ಎಂದ ನಟ ನಾಗ ಶೌರ್ಯ

Krishnaveni K
ಶುಕ್ರವಾರ, 28 ಜೂನ್ 2024 (09:45 IST)
Photo Credit: Facebook
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಪರವಾಗಿ ತೆಲುಗು ನಟ ನಾಗ ಶೌರ್ಯ ಮಾತನಾಡಿದ್ದಾರೆ. ದರ್ಶನ್ ಅಣ್ಣ ಯಾರಿಗೂ ತೊಂದರೆ ಕೊಡುವವರಲ್ಲ ಎಂದಿದ್ದಾರೆ.

ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ದರ್ಶನ್ ಆಂಡ್ ಗ್ಯಾಂಗ್ ಹಲ್ಲೆ ನಡೆಸಿದ ಪರಿಣಾಮ ಆತ ಸಾವನ್ನಪ್ಪಿದ್ದ ಎಂದು ಆರೋಪಿಸಲಾಗಿದೆ. ಈ ಸಂಬಂಧ ಇದೀಗ ದರ್ಶನ್ ಮತ್ತು ಇತರೆ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಈ ನಡುವೆ ಕನ್ನಡ ಚಿತ್ರರಂಗದ ಕೆಲವೇ ಕೆಲವು ಕಲಾವಿದರನ್ನು ಬಿಟ್ಟರೆ ಉಳಿದವರು ಯಾರೂ ದರ್ಶನ್ ಪರವಾಗಿ ಮಾತನಾಡಿಲ್ಲ. ಆದರೆ ಇದೀಗ ತೆಲುಗು ನಟ ನಾಗ ಶೌರ್ಯ ದರ್ಶನ್ ಪರವಾಗಿ ಮಾತನಾಡಿದ್ದಾರೆ. ಜೊತೆಗೆ ರೇಣುಕಾಸ್ವಾಮಿ ಸಾವಿಗೂ ಸಂತಾಪ ವ್ಯಕ್ತಪಡಿಸಿದ್ದಾರೆ.

‘ಮೃತರ ಕುಟುಂಬದ ಬಗ್ಗೆ ಕೇಳಿದಾಗ ತೀವ್ರ ದುಃಖವಾಗುತ್ತದೆ ಮತ್ತು ಅವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹಾರೈಸುತ್ತೇನೆ. ಆದರೆ ಜನ ಕೋರ್ಟ್ ತೀರ್ಪು ಬರುವ ಮೊದಲೇ ದರ್ಶನ್ ಬಗ್ಗೆ ತೀರ್ಪು ನೀಡುತ್ತಿರುವುದು ವಿಷಾಧನೀಯ. ದರ್ಶನ್ ಅಣ್ಣ ತಮ್ಮ ಕನಸಿನಲ್ಲೂ ಇನ್ನೊಬ್ಬರಿಗೆ ಕೇಡು ಮಾಡುವವರಲ್ಲ. ಅವರನ್ನು ಹತ್ತಿರದಿಂದ ನೋಡಿದವರಿಗೆ ಅವರು ಎಂಥಾ ವ್ಯಕ್ತಿ ಎಂದು ಗೊತ್ತಿರುತ್ತದೆ. ನಾನು ಈ ಸುದ್ದಿಯನ್ನು ನಂಬಲು ಸಾಧ್ಯವಿಲ್ಲ. ನ್ಯಾಯದ ಬಗ್ಗೆ ನನಗೆ ವಿಶ್ವಾಸವಿದೆ’ ಎಂದು ನಾಗ ಶೌರ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಮುಂದಿನ ಸುದ್ದಿ
Show comments