Publish Date: Thu, 18 Aug 2022 (10:00 IST)
Updated Date: Thu, 18 Aug 2022 (10:19 IST)
ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟ ನಾಸರ್ ಶೂಟಿಂಗ್ ವೇಳೆ ಪೆಟ್ಟುಮಾಡಿಕೊಂಡು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಬಾಹುಬಲಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಪೋಷಕ ಪಾತ್ರಗಳ ಮೂಲಕ ಖ್ಯಾತರಾಗಿರುವ ನಟ ನಾಸರ್ ತೆಲಂಗಾಣದ ಪೊಲೀಸ್ ಅಕಾಡೆಮಿಯಲ್ಲಿ ಶೂಟಿಂಗ್ ನಡೆಯುತ್ತಿದ್ದಾಗ ಕಣ್ಣಿಗೆ ಪೆಟ್ಟು ಮಾಡಿಕೊಂಡಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಲಾಯಿತು. ಅವರ ಆರೋಗ್ಯ ಈಗ ಸುಧಾರಿಸಿದೆ ಎನ್ನಲಾಗಿದೆ. ಆದರೆ ಅಧಿಕೃತ ಹೇಳಿಕೆ ಇನ್ನೂ ಬಂದಿಲ್ಲ.