ಹೈದರಾಬಾದ್ : ಪವನ್ ಕಲ್ಯಾಣ್ ಟಾಲಿವುಡ್ ನ ಒಬ್ಬ ಸ್ಟಾರ್ ನಟ. ಇವರು ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಇದೀಗ ಕೊರೊನಾ ಸೋಂಕಿನಿಂದ ಬಳಲುತ್ತಿರುವ ಪವನ್ ಕಲ್ಯಾಣ್ ಅವರಿಗೆ ಹಲವು ಸಿನಿಮಾ ಆಫರ್ ಗಳು ಬರುತ್ತಿದೆ ಎಂಬುದಾಗಿ ತಿಳಿದುಬಂದಿದೆ.
ಪವನ್ ಕಲ್ಯಾಣ್ ಅಯ್ಯಪ್ಪನೂಮ್ ಕೊಶಿಯಮ್ ರಿಮೇಕ್ ಮತ್ತು ಹರಿಹರ ವೀರಮಲ್ಲು ಎಂಬ ಎರಡು ಯೋಜನೆಯಲ್ಲಿ ಏಕಕಾಲದಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ. ಈ ಎರಡು ಯೋಜನೆಗಳು ಪೂರ್ಣಗೊಂಡ ಬಳಿಕ ಅವರು ಹರೀಶ್ ಶಂಕರ್ ಮತ್ತು ಸುರೇಂದರ್ ರೆಡ್ಡಿ ನಿರ್ದೇಶನದ ಎರಡು ಯೋಜನೆಗಳಿಗೆ ಸಹಿ ಹಾಕಿದ್ದಾರೆ.
ಇತ್ತೀಚಿನ ಮಾಹಿತಿ ಪ್ರಕಾರ ಜೆಬಿ ಎಂಟರ್ ಟೈನ್ ಮೆಂಟ್ ನಿರ್ಮಾಣದಲ್ಲಿ ಪವನ್ ಕಲ್ಯಾಣ್ ಮತ್ತೊಂದು ಯೋಜನೆಗೆ ಸಹಿ ಹಾಕಲಿದ್ದಾರೆ ಎನ್ನಲಾಗಿದೆ.