Select Your Language

Notifications

webdunia
webdunia
webdunia
webdunia

ಕತ್ರಿನಾ ಕೈಫ್‌ ಬೆನ್ನಲ್ಲೇ ಕುಕ್ಕೆ ಸುಬ್ರಹ್ಮಣ್ಯಗೆ ಭೇಟಿ ನೀಡಿದ ನಟ ಪ್ರಭುದೇವ

Kukke Subramanya, Actor Prabhudeva

Sampriya

ಮಂಗಳೂರು , ಶನಿವಾರ, 15 ಮಾರ್ಚ್ 2025 (17:41 IST)
ಮಂಗಳೂರು: ಈಚೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್‌ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ಖ್ಯಾತ ನಟ ಪ್ರಭುದೇವ ಅವರು ಕೂಡಾ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.

ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು. ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು.

ಬಳಿಕ ದೇವಳದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ ದಂಪತಿಯನ್ನು ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಿದರು.

ಬಳಿಕ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿ, ಅಲ್ಲಿನ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಮಂತ್ರಾಕ್ಷತೆ ಪಡೆದರು.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಕರಣದಲ್ಲಿ ನನ್ನನು ಸಿಲುಕಿಸಲಾಗಿದೆ, ನಾನು ನಿರ್ದೋಷಿ: ಡಿಆರ್‌ಐ ಎಡಿಜಿಗೆ ರನ್ಯಾ ಪತ್ರ