Select Your Language

Notifications

webdunia
webdunia
webdunia
webdunia

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ದರ್ಶನ್ ಫ್ಯಾನ್ಸ್ ಕೇಸ್

Sampriya

ದೊಡ್ಡಬಳ್ಳಾಪುರ , ಬುಧವಾರ, 30 ಜುಲೈ 2025 (16:53 IST)
Photo Credit X
ದೊಡ್ಡಬಳ್ಳಾಪುರ: ನಟ ಪ್ರಥಮ್‌ಗೆ ಜೀವ ಬೆದರಿಕೆ ಆರೋಪ ಪ್ರಕರಣ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಈ ಸಂಬಂದ  ಎ1 ಆರೋಪಿಯಾಗಿ ಬೇಕರಿ ರಘು ಹಾಗೂ ಎ2 ಆರೋಪಿಯಾಗಿ ಯಶಸ್ವಿನಿ ಹಾಗೂ ಇತರರ ವಿರುದ್ದ ಎಫ್‌ಐಆರ್‌ ದಾಖಲಾಗಿದೆ.

ಜುಲೈ 22ರ ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ ಪ್ರಥಮ್ ಬಂದಿದ್ದರು. ಈ ವೇಳೆ ತನಗೆ ಮಾರಕಾಸ್ತ್ರಗಳಿಂದ ಜೀವ ಬೆದರಿಕೆ ಹಾಕಲಾಗಿದೆ ಎಂದು ಹೇಳಿದ್ದರು. ಈ ಘಟನೆ ನಡೆದು ಹಲವು ದಿನಗಳ ನಂತರ ಖುದ್ದು, ಪ್ರಥಮ್ ನೇರವಾಗಿ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ಅವರನ್ನು ಭೇಟಿಯಾಗಿ ದೂರು ನೀಡಿದ್ದರು. 

ಪ್ರಥಮ್ ದೂರಿನ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸದ್ಯ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಜೀವ ಬೆದರಿಕೆ ಹಾಕಲಾಗಿದ್ದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. 




 

Share this Story:

Follow Webdunia kannada

ಮುಂದಿನ ಸುದ್ದಿ

ದರ್ಶನ್ ಫ್ಯಾನ್ಸ್‌ ವಿಚಾರದಿಂದ ನನ್ನ ಹೆಂಡ್ತಿ ಸಂಬಂಧ ಹಾಳಾಗಿದೆ: ಪ್ರಥಮ್ ಆಕ್ರೋಶ