ಕಾಂತಾರ 2 ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಇಂದು ಕುಟುಂಬದೊಂದಿಗೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ದೇವಿಗೆ ವಿಶೇಷ ಪ್ರಾರ್ಥನೆ ಮಾಡಿ, ಪಟ್ಟೆ ಸೀರೆ ಅರ್ಪಿಸಿದರು.
ಕಾಂತಾರ 2 ಸಿನಿಮಾ ಶೂಟಿಂಗ್ ಬಗ್ಗೆ ಅಪ್ಡೇಟ್ ನೀಡಿದ ರಿಷಬ್ ಅವರು, ಇದೀಗ ಸಿನಿಮಾದ ಶೂಟಿಂಗ್ ಕೊನೆಯ ಹಂತದಲ್ಲಿದೆ. ಹಾಗಾಗಿ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದೇನೆ. ಅಕ್ಟೋಬರ್ 2ರಂದು ಚಿತ್ರ ಬಿಡುಗಡೆ ಮಾಡುವುದಾಗಿ ಚಿಂತನೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಇದೇ ವೇಳೆ, ಫಿಲ್ಮ್ ಫೆಸ್ಟಿವಲ್‌ನಲ್ಲಿ ಡಿಸಿಎಂ ಡಿಕೆಶಿ ಕಲಾವಿದರಿಗೆ ನಟ್ಟು ಬೋಲ್ಟು ಟೈಟ್ ಮಾಡೋ ವಿವಾದಕ್ಕೆ ಪ್ರತಿಕ್ರಿಯಿಸಿ, ನಾನು ಚಿತ್ರದ ಶೂಟಿಂಗ್‌ನಲ್ಲಿದ್ದೇನೆ ಆ ಬಗ್ಗೆ ಗೊತ್ತಿಲ್ಲ ಎಂದು ಹೇಳಿದರು.
ದಕ್ಷಿಣ ಕನ್ನಡದ ಖ್ಯಾತ ದೇವಸ್ಥಾನಗಳಲ್ಲಿ ಒಂದಾಗಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಈಚೆಗೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಟುಂಬ, ಸಂಸದೆ, ನಟಿ ಕಂಗನಾ ರಣಾವತ್ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು.