ಸಿನಿಮಾ ಸಕ್ಸಸ್ ಖುಷಿ ಮಧ್ಯೆ ದಿಢೀರ್ ಎಚ್ ಡಿ ದೇವೇಗೌಡರನ್ನು ಭೇಟಿಯಾದ ರಿಷಬ್

Sampriya
ಶುಕ್ರವಾರ, 17 ಅಕ್ಟೋಬರ್ 2025 (17:04 IST)
Photo Credit X
ಬೆಂಗಳೂರು: ಕಾಂತಾರ ಚಾಪ್ಟರ್ 1 ಗೆಲುವಿನ ಖುಷಿಯಲ್ಲಿರುವ ನಟ, ನಿರ್ದೇಶಕ ರಿಷಭ್ ಶೆಟ್ಟಿ ಅವರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಭೇಟಿಯಾಗಿ ಕೆಲಹೊತ್ತು ಮಾತುಕತೆ ನಡೆಸಿದರು. 

ಇನ್ನೂ ದೇವೇಗೌಡರ ಜತೆಗಿನ ಭೇಟಿ ಫೋಟೋವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡ ರಿಷಭ್ ಶೆಟ್ಟಿ ಅವರು, ʼಇದು ಬರೀ ಭೇಟಿಯಲ್ಲ, ನಮ್ಮ ನಾಡಿನ ಹಿರಿಯ ಚೇತನದೊಂದಿಗಿನ ಒಂದು ಸುಂದರ ಸಂವಾದ. ನಾಡಿನ ಅತ್ಯುನ್ನತ ಸ್ಥಾನಕ್ಕೆ ಏರಿ, ಕನ್ನಡಿಗರ ಕೀರ್ತಿಯನ್ನು ಹೆಚ್ಚಿಸಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಆಶೀರ್ವಾದ ಪಡೆದ ಕ್ಷಣಗಳು. ಅವರ ಅನುಭವದ ಮಾತುಗಳು ಮತ್ತು ಪ್ರೀತಿಯ ತಲೆದಡವು, ನನಗೆ ಮತ್ತಷ್ಟು ಶಕ್ತಿ ತುಂಬಿದೆ. ಈ ಪ್ರೀತಿ, ಆಶೀರ್ವಾದ ಸದಾ ಇರಲಿʼ ಎಂದು ಅವರು ಬರೆದುಕೊಂಡಿದ್ದಾರೆ. 

2022ರಲ್ಲಿ ಬಿಡುಗಡೆಯಾದ ಕಾಂತಾರ ಸಿನಿಮಾ ದೇಶ ವಿದೇಶದಲ್ಲಿ ಸದ್ದು ಮಾಡಿತಯ. ನಿರೀಕ್ಷೆಗೂ ಮೀರಿ ಸಿನಿಮಾ ಕನೆಕ್ಷನ್ ಕಂಡಿತು. ಇದೀಗ ಕಾಂತಾರ ಚಾಪ್ಟರ್ 1 ಅನ್ನು ಅಕ್ಟೋಬರ್ 2ರಂದು ತೆರೆಮೇಲೆ ತಂದಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. 

ಬಾಲಿವುಡ್, ಕಾಲಿವುಡ್‌, ಸೇರಿದಂತೆ ಎಲ್ಲ ಭಾಷೆಯ ಸಿನಿಮಾ ರಂಗದಿಂದಲೂ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. 

ಹೊಂಬಾಳೆ ಫಿಲ್ಮ್ಸ್‌  ನಿರ್ಮಾಣದ ಈ ಚಿತ್ರ ಅಕ್ಟೋಬರ್‌ 2ರಂದು ವಿಶ್ವಾದ್ಯಂತ ವಿವಿಧ ಭಾಷೆಗಳಲ್ಲಿ ತೆರೆಕಂಡಿದ್ದು, ಈಗಾಗಲೇ ಜಾಗತಿಕವಾಗಿ 700 ಕೋಟಿ ರೂ. ಬಾಚಿಕೊಂಡು ಮುನ್ನುಗ್ಗುತ್ತಿದೆ. ಚಿತ್ರತಂಡ ಇದೀಗ ಅಭೂತಪೂರ್ವ ಯಶಸ್ಸನ್ನು ಸಂಭ್ರಮಿಸುತ್ತಿದೆ. ಈ ಮಧ್ಯೆ ರಿಷಬ್‌ ಶೆಟ್ಟಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ  ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

BBK12: ಕಿಚ್ಚ ಸುದೀಪ್ ಹೇಳಿದ್ರೂಂತ ಡ್ರಾಮಾ ಮಾಡ್ತಿದ್ದಾರಾ ಅಶ್ವಿನಿ, ಜಾನ್ವಿ

ಮುಂದಿನ ಸುದ್ದಿ
Show comments