ರಾಜು ತಾಳಿಕೋಟೆ ಜತೆಗಿನ ಒಡನಾಟ ನೆನೆದು ನಟ ಶೈನ್ ಶೆಟ್ಟಿ ಕಣ್ಣೀರು

Sampriya
ಸೋಮವಾರ, 13 ಅಕ್ಟೋಬರ್ 2025 (21:00 IST)
Photo Credit X
ಉಡುಪಿ: ನಿಧನರಾದ ರಾಜು ತಾಳಿಕೋಟೆ ಅವರು ನನ್ನನ್ನು ಮಗನ ಹಾಗೇ ನೋಡಿಕೊಳ್ಳುತ್ತಿದ್ದು. ಸಿನಿಮಾ ಒಪ್ಪಿಕೊಂಡಿದ್ದು ನಿನಗೋಸ್ಕರ ಎಂದು  ಹೇಳುತ್ತಿದ್ದರು ಎಂದು ರಾಜು ತಾಳಿಕೋಟೆಯವರ ನಿಧನಕ್ಕೆ ನಟ ಶೈನ್ ಶೆಟ್ಟಿ  ಕಣ್ಣೀರು ಹಾಕಿದ್ದಾರೆ. 

ಮಣಿಪಾಲ ಆಸ್ಪತ್ರೆ  ಬಳಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಬಿಗ್‌ಬಾಸ್ ಸೀಸನ್ 7ರಲ್ಲಿ ನಾವು ಜತೆಗಿದ್ದೆವು. ಅವರೊಂದಿಗೆ ಉತ್ತಮ ಒಡನಾಟವಿತ್ತು.ಅವರದ್ದು ತುಂಬಾನೇ ತಮಾಷೆಯ ವ್ಯಕ್ತಿತ್ವ.  ಸಿನಿಮಾ ನಿರ್ಮಾಣದ ಕಾಲ ಕೂಡಿ ಬಂದಾಗ ರಾಜು ಅವರನ್ನು ಸಂಪರ್ಕ ಮಾಡಿದ್ದೆ. ನಮ್ಮ ಸಿನಿಮಾಗೆ ಮೊದಲು ಆಯ್ಕೆ ಮಾಡಿದ್ದು ರಾಜು ತಾಳಿಕೋಟೆ ಅವರನ್ನು. ಪಾತ್ರ ಮತ್ತು ಡೈಲಾಗ್ ಅವರಿಗಾಗಿಯೇ ಬರೆದಿದ್ದೇವೆ. 

ಸಿನಿಮಾದ ಶೂಟಿಂಗ್‌ಗಾಗಿ 40 ದಿನದ ಶೆಡ್ಯೂಲ್ ಫಿಕ್ಸ್ ಆಗಿತ್ತು. ಹೆಬ್ರಿಯಲ್ಲಿ ಮೂರು ದಿನದ ಶೂಟಿಂಗ್ ಮುಗಿಸಿದ್ದೇವೆ. ಉಡುಪಿ, ಮಂಗಳೂರು ಸುತ್ತಾಡಲು, ಮೀನು ತಿನ್ನಲು ಒಂದು ದಿನ ಮೊದಲೇ ಬಂದಿದ್ದರು. ಗೆಳೆಯರ ಜೊತೆ ಬೇರೆ ಬೇರೆ ಜಾಗಕ್ಕೆ ಸುತ್ತಾಡಿದ್ದಾರೆ ಎಂದರು.

ಭಾನುವಾರ ರಾತ್ರಿ 11 ಗಂಟೆಗೆ ತಂಡದ ಜೊತೆ ಮಾತನಾಡಿದ್ದಾರೆ. ಬಳಿಕ 11:59ಕ್ಕೆ ಉಸಿರಾಟ ಸಮಸ್ಯೆ ಅಂತ ಫೋನ್ ಮಾಡಿದ್ದಾರೆ. ಕೂಡಲೇ ಹೆಬ್ರಿ ಹೆಲ್ತ್ಕೇರ್ ಆಸ್ಪತ್ರೆಗೆ ಕರೆದುಕೊಂಡು ಹೋದೆವು. ಅಲ್ಲಿಂದ ನೇರ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಬಂದೆವು. ಕಳೆದ ರಾತ್ರಿಯೇ ಕುಟುಂಬಕ್ಕೆ ಮಾಹಿತಿಯನ್ನು ಕೊಟ್ಟಿದ್ದೇವೆ. ಮಕ್ಕಳು ಕುಟುಂಬಸ್ಥರು ಬಂದಿದ್ದರು. ಬಳಿಕ ಕೊನೆಯುಸಿರೆಳೆದಿದ್ದಾರೆ ಎಂದು ಬೇಸರಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments