Publish Date: Sat, 25 Feb 2017 (21:31 IST)
Updated Date: Sat, 25 Feb 2017 (21:35 IST)
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು (ಫೆ.25) ಶಿವಮೊಗ್ಗದ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಕಳೆದ ಲೋಕಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ವಿಚಾರಣೆ ಎದುರಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು ಮಾರ್ಚ್ 1ಕ್ಕೆ ಪ್ರಕರಣವನ್ನು ಮುಂದೂಡಿದ್ದಾರೆ. ಶಿವರಾಜ್ ಕುಮಾರ್ ಜತೆಗೆ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಹಾಗೂ ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಸಹ ಹಾಜರಾಗಿದ್ದರು.
ಅಭಿಮಾನಿಯೊಬ್ಬರ ಆಹ್ವಾನದ ಮೇರೆಗೆ ಶಿವರಾಜ್ ಕುಮಾರ್ ಅವರ ಮನೆಗೆ ಭೇಟಿ ನೀಡಿದ್ದರು. ಅವರು ಮತಯಾಚನೆಗೆ ಹೋಗಿರಲಿಲ್ಲ. ಈ ಬಗ್ಗೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆದಿದೆ ಎಂದಿದ್ದಾರೆ ಮಧು ಬಂಗಾರಪ್ಪ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.