Webdunia - Bharat's app for daily news and videos

Install App

ಭೀಕರ ರಸ್ತೆ ಅ‍ಪಘಾತದಲ್ಲಿ ನಟ ಸೋನು ಸೂದ್‌ ಪತ್ನಿಗೆ ಗಾಯ

Sampriya
ಮಂಗಳವಾರ, 25 ಮಾರ್ಚ್ 2025 (20:39 IST)
Photo Courtesy X
ಬಹುಭಾಷಾ ನಟ ಸೋನು ಸೂದ್ ಅವರ ಪತ್ನಿ ಸೋನಾಲಿ ಸೂದ್ ಅವರು ಮುಂಬೈ-ನಾಗ್ಪುರ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ನಾಗ್ಪುರದಲ್ಲಿ ಈ ಅಪಘಾತ ನಡೆದಿದ್ದು, ಸೋನಾಲಿ ತನ್ನ ಸಹೋದರಿಯ ಮಗ ಮತ್ತು ಇನ್ನೊಬ್ಬ ಮಹಿಳೆಯೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅವರ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರಸ್ತುತ ನಾಗ್ಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏತನ್ಮಧ್ಯೆ, ಸೋನು ಸೂದ್ ಅವರ ಇದೀಗ ಪತ್ನಿ ಆರೋಗ್ಯ ತಿಳಿದುಕೊಳ್ಳಲು ನಾಗ್ಪುರಕ್ಕೆ ಧಾವಿಸಿದ್ದಾರೆ ಎಂದು ವರದಿಯಾಗಿದೆ.  ಅಧಿಕಾರಿಗಳು ಸ್ಥಳದಲ್ಲಿ ಪರಿಸ್ಥಿತಿಯನ್ನು ನಿರ್ಣಯಿಸುತ್ತಿದ್ದಾರೆ ಮತ್ತು ಅಪಘಾತದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಸೋನು 1996 ರಲ್ಲಿ ಸೋನಾಲಿಯನ್ನು ವಿವಾಹವಾದರು. ಮೂಲತಃ ಆಂಧ್ರಪ್ರದೇಶದವರಾದ ಅವರು ನಾಗ್ಪುರ ವಿಶ್ವವಿದ್ಯಾಲಯದಿಂದ ಎಂಬಿಎ ಪದವಿ ಪಡೆದರು. ದಂಪತಿಗೆ ಅಯಾನ್ ಮತ್ತು ಈಶಾನ್ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ. ವೃತ್ತಿಪರವಾಗಿ, ಸೋನಾಲಿ ಒಬ್ಬ ಚಲನಚಿತ್ರ ನಿರ್ಮಾಪಕಿ.

ಸೋನು ಸೂದ್ ಅವರು ಯುಎಸ್ಎಯಲ್ಲಿ ತಮ್ಮ ಮುಂಬರುವ ಚಿತ್ರ 'ಫತೇಹ್' ಸೆಟ್‌ಗಳ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments