ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಘಟನೆ ಹಿನ್ನೆಲೆಯಲ್ಲಿ ಹಲವು ಸ್ವರೂಪಗಳು ತೆರೆದುಕೊಳ್ಳುತ್ತಿವೆ.
ಈ ನಡುವೆ, ಸತ್ಯ ಮೇಲುಗೈ ಸಾಧಿಸಬೇಕು ಎಂದು ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಹೊಸ ಪೋಸ್ಟ್ ಮಾಡಿದ್ದು, ತಮ್ಮ ಸಹೋದರನ ಸಾವಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.
ಈಗಾಗಲೇ ಸುಶಾಂತ್ ಅವರ ತಂದೆಯು ನಟಿ ರಿಯಾ ಚಕ್ರವರ್ತಿ ಸೇರಿದಂತೆ ಆರು ಮಂದಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಕೇಸ್ ದಾಖಲಿಸಿದ್ದಾರೆ.
ಸುಶಾಂತ್ ಸಾವಿಗೆ ನ್ಯಾಯ ಸಿಗಲೇಬೇಕು ಎಂದು ಅವರ ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಹೇಳಿದ್ದಾರೆ.