Select Your Language

Notifications

webdunia
webdunia
webdunia
webdunia

ನಟ ಸುಶಾಂತ್ ಸಿಂಗ್ ಮಾಜಿ ಮ್ಯಾನೇಜರ್ ಮೇಲೆ ಅತ್ಯಾಚಾರ?

ದಿಶಾ ಸಾಲಿಯಾನ್
ಬಾಲಿವುಡ್ ನಟ ಸುಶಾಂತ್ ಸಿಂಗ ರಜಪೂತ್ ರ ಮಾಜಿ ಮ್ಯಾನೇಜರ್ ವಿರುದ್ಧ ವದಂತಿಗಳು ಹರಿದಾಡಲಾರಂಭಿಸಿವೆ.


ನಟ ಸುಶಾಂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಅಪಾರ್ಟ್ಮೆಂಟ್ ನಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಾಗ ಆಕೆಯ ಮೈಮೇಲೆ ಬಟ್ಟೆಗಳು ಇರಲಿಲ್ಲ ಅಂತೆಲ್ಲ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ.

ಇಂಥ ಸುದ್ದಿಗಳಿಂದ ರೋಸಿ ಹೋಗಿರುವ ದಿಶಾ ಸಾಲಿಯಾನ್ ರ ತಂದೆ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲು ಮಾಡಿದ್ದಾರೆ.

ದಿಶಾ ಸಾಲಿಯಾನ್ ಆತ್ಮಹತ್ಯೆ ಮಾಡಿಕೊಂಡಾಗ ಆಕೆ ಮೇಲೆ ಅತ್ಯಾಚಾರ ನಡೆದಿಲ್ಲ. ಮೈ ಮೇಲೆ ಬಟ್ಟೆಗಳು ಇದ್ದವು ಎನ್ನುವುದನ್ನು ಪೊಲೀಸರು ಖಚಿತಪಡಿಸಿದ್ದಾರೆ.

ಈ ನಡುವೆ ಸುಳ್ಳು ಸುದ್ದಿ ಹರಡುತ್ತಿರುವವರ ವಿರುದ್ಧ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಯಶ್ ಸಿನಿಮಾಗೆ ‘ಗೂಗ್ಲಿ’ ಎಂದು ಹೆಸರಿಡಲು ನಿರ್ದೇಶಕ ಪವನ್ ಎಷ್ಟೆಲ್ಲಾ ಕಷ್ಟಪಟ್ಟಿದ್ದರು ಗೊತ್ತಾ?!