Publish Date: Thu, 04 Aug 2022 (10:12 IST)
Updated Date: Thu, 04 Aug 2022 (10:19 IST)
ಬೆಂಗಳೂರು: ಈ ಬಾರಿ ಕರ್ನಾಟಕದಲ್ಲೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ರೆಡಿಯಾಗಿರುವ ಆಮ್ ಆದ್ಮಿ ಪಕ್ಷ ಕರ್ನಾಟಕದಲ್ಲಿ ಪಕ್ಷ ಬಲಪಡಿಸಲು ಕ್ರಮ ಕೈಗೊಳ್ಳುತ್ತಿದೆ.
ಈಗಾಗಲೇ ಸ್ಯಾಂಡಲ್ ವುಡ್ ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದರು.
ಇದೀಗ ಸ್ಯಾಂಡಲ್ ವುಡ್ ನಲ್ಲಿ ಪೋಷಕ ಪಾತ್ರಗಳಿಂದ ಗುರುತಿಸಿಕೊಂಡಿರುವ ನಟ ಟೆನಿಸ್ ಕೃಷ್ಣ ಆಪ್ ಪಕ್ಷ ಸೇರಿಕೊಳ್ಳುತ್ತಿದ್ದಾರೆ. ಇಂದು ಅಧಿಕೃತವಾಗಿ ಟೆನಿಸ್ ಕೃಷ್ಣ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.