Webdunia - Bharat's app for daily news and videos

Install App

ಸೈಬರ್ ಠಾಣೆಗೆ ದೂರು ಕೊಟ್ಟ ನಟ ವಿಜಯ್ ದೇವರಕೊಂಡ

Krishnaveni K
ಸೋಮವಾರ, 8 ಏಪ್ರಿಲ್ 2024 (13:53 IST)
ಹೈದರಾಬಾದ್: ಟಾಲಿವುಡ್ ನಟ ವಿಜಯ್ ದೇವರಕೊಂಡ ತಮ್ಮ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

ಇತ್ತೀಚೆಗೆ ವಿಜಯ್ ದೇವರಕೊಂಡ ಅಭಿನಯದ ಫ್ಯಾಮಿಲಿ ಸ್ಟಾರ್ ಸಿನಿಮಾ ಬಿಡುಗಡೆಯಾಗಿತ್ತು. ಆದರೆ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ನಿರೀಕ್ಷಿಸಿದಷ್ಟು ಹಣ ಗಳಿಸಿಲ್ಲ. ಹೀಗಾಗಿ ಚಿತ್ರದ ಬಗ್ಗೆ ಆನ್ ಲೈನ್ ತಾಣಗಳಲ್ಲಿ ನೆಗೆಟಿವ್ ರಿವ್ಯೂ ಕಂಡುಬರುತ್ತಿದೆ. ಹೀಗಾಗಿ ಇಂತಹ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ವಿಜಯ್ ದೇವರಕೊಂಡ ಟೀಂ ಸೈಬರ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಚಿತ್ರದ ಬಗ್ಗೆ ನೆಗೆಟಿವ್ ವರದಿಗಳನ್ನು ನೀಡುತ್ತಿರುವುದರಿಂದ ಗಳಿಕೆ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಇಂತಹ ಸುದ್ದಿಗಳು ಹರಡದಂತೆ ಕ್ರಮ ಕೈಗೊಳ್ಳಬೇಕೆಂದು ವಿಜಯ್ ತಂಡ ದೂರಿನಲ್ಲಿ ಹೇಳಿದೆ.

ಇತ್ತೀಚೆಗೆ ವಿಜಯ್ ದೇವರಕೊಂಡ ಸಿನಿಮಾ ಫ್ಯಾಮಿಲಿ ಸ್ಟಾರ್ ಬಾಕ್ಸ್ ಆಫೀಸ್ ನಲ್ಲಿ ಮುಗ್ಗರಿಸಿದೆ.  ವಿಜಯ್ ನಟನೆ ಚೆನ್ನಾಗಿಲ್ಲ. ಅವರು ಆಯ್ಕೆ ಮಾಡುವ ಕತೆಗಳು ಒಂದೇ ತರ ಇರುತ್ತವೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಹಬ್ಬಿತ್ತು. ಫ್ಯಾಮಿಲಿ ಸ್ಟಾರ್ ಸಿನಿಮಾದಲ್ಲಿ ವಿಜಯ್ ಗೆ ನಾಯಕಿಯಾಗಿ ಮೃಣಾಲ್ ಠಾಕೂರ್ ಅಭಿನಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments