Publish Date: Fri, 08 Jul 2022 (16:04 IST)
Updated Date: Fri, 08 Jul 2022 (16:07 IST)
ಚೆನ್ನೈ: ತಮಿಳು ಸ್ಟಾರ್ ನಟ ವಿಕ್ರಮ್ ನಿನ್ನೆ ಹೃದಯಾಘಾತಕ್ಕೊಳಗಾಗಿದ್ದು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದೆ ಎಂಬ ಸುದ್ದಿ ಬೆಳಕಿಗೆ ಬಂದಿದೆ.
ನಟನಿಗೆ ಆಂಜಿಯೋಪ್ಲಾಸ್ಟಿ ನಡೆಸಲಾಗಿದ್ದು, ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ. ಈ ಬಗ್ಗೆ ಆಸ್ಪತ್ರೆ ಕಡೆಯಿಂದ ಇನ್ನೂ ಅಧಿಕೃತ ವರದಿ ಬಂದಿಲ್ಲ. ಇಂದು ಸಂಜೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ‍್ಯತೆಯಿದೆ ಎನ್ನಲಾಗಿದೆ.
ಇಂದು ಸಂಜೆ ನಡೆಯಲಿರುವ ಪೊನ್ನಿಯನ್ ಸೆಲ್ವನ್ ಸಿನಿಮಾದ ಟೀಸರ್ ಲಾಂಚ್ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಬೇಕಾಗಿತ್ತು. ಸದ್ಯದಲ್ಲೇ ಅವರ ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರಿಂದ ಮಾಹಿತಿ ಸಿಗಲಿದೆ.