Publish Date: Mon, 11 Jul 2022 (16:20 IST)
Updated Date: Mon, 11 Jul 2022 (16:22 IST)
ಚೆನ್ನೈ: ಹೃದಯ ಸಂಬಂಧೀ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ತಮಿಳು ನಟ ವಿಕ್ರಂ ಇದೀಗ ಡಿಸ್ಚಾರ್ಜ್ ಆಗಿದ್ದಾರೆ.
ಇತ್ತೀಚೆಗೆ ಉಸಿರಾಟದಲ್ಲಿ ತೊಂದರೆಯಾಗಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ಅವರು ದಾಖಲಾಗಿದ್ದರು. ಇದೀಗ ಗುಣಮುಖರಾಗಿದ್ದು ಮನೆಗೆ ಮರಳಿದ್ದಾರೆ.
ಅವರಿಗೆ ಹೃದಯಾಘಾತವಾಗಿದೆ ಎಂಬ ಸುದ್ದಿ ಹರಡಿತ್ತು. ಬಳಿಕ ವಿಕ್ರಂ ಪುತ್ರ ಧ್ರುವ ಹೃದಯಾಘಾತವಾಗಿಲ್ಲ, ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದ್ದರು.