ಚೆನ್ನೈ : ತಮಿಳು ನಟ ವಿಕ್ರಮ್ ಅವರ ಮನೆ ಮೇಲೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಪೊಲೀಸರಿಗೆ ಕರೆ ಮಾಡಿದ್ದಾನೆ ಎಂಬುದಾಗಿ ತಿಳಿದುಬಂದಿದೆ.
ನಟ ವಿಕ್ರಮ್ ಅವರು ಬೆಸೆಂಟ್ ನಗರ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಮಂಗಳವಾರ ಅಪರಿಚಿತ ವ್ಯಕ್ತಿಯೊಬ್ಬ ಚೆನ್ನೈ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ನಟ ವಿಕ್ರಮ್ ಅವರ ಮನೆಯಲ್ಲಿ ಬಾಂಬ್ ಇದ್ದು, ಇನ್ನೂ ಕೆಲವೇ ನಿಮಿಷಗಳಲ್ಲಿ ಅದು ಸ್ಫೋಟಗೊಳ್ಳುತ್ತದೆ ಎಂದು ಹೇಳಿದ್ದಾರೆ.
ಪೊಲೀಸರು ಕೂಡಲೇ ಬಾಂಬ್ ಸ್ಕ್ವಾಡ್ ಜೊತೆಗೆ ವಿಕ್ರಮ ಮನೆ ಮೇಲೆ ದಾಳಿ ಮಾಡಿ ಪರಿಶೀಲಿಸಿದ್ದಾರೆ. ಆದರೆ ಅಲ್ಲಿ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ. ಕೊನೆಗೆ ಇದು ವದಂತಿ ಎಂದು ತಿಳಿದ ಬಳಿಕ ತನಿಖೆ ನಡೆಸಿದ ಪೊಲೀಸರಿಗೆ ವಿಲ್ಲುಪುರಂ ಜಿಲ್ಲೆಯ ಮರಕ್ಕಾನಂನಿಂದ ಬಾಂಬ್ ಬೆದರಿಕೆ ಹಾಕಲಾಗಿದೆ ಎಂದು ತಿಳಿದುಬಂದಿದೆ.