Webdunia - Bharat's app for daily news and videos

Install App

ನಟ ವಿನೋದ್ ರಾಜ್‌ಗೆ ಅನಾರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Sampriya
ಬುಧವಾರ, 12 ಜೂನ್ 2024 (15:07 IST)
Photo Courtesy X
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ವಿನೋದ್ ರಾಜ್‌ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರುಳಿನ ಸಮಸ್ಯೆಯಿಂದಾಗಿ ಅವರು ಆಸ್ಪತ್ರೆಗೆ ದಾಖಲಾಗಿದೆ ಎಂದು ತಿಳಿದುಬಂದಿದೆ.

ಕನ್ನಡದ ಮೇರುನಟಿ ಲೀಲಾವತಿ ಅವರ ಪುತ್ರನಾಗಿರುವ ವಿನೋದ್ ರಾಜ್ 11 ವರ್ಷಗಳ ಹಿಂದೆ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ವೇಳೆ, ಅವರ ಹಾರ್ಟ್‌ಗೆ ಸ್ಟಂಟ್ ಅಳವಡಿಸಲಾಗಿತ್ತು.

ಇದೀಗ ಅದೇ ಸ್ಟಂಟ್‌ನಿಂದ ಕರುಳಿನ ಸಮಸ್ಯೆ ಎದುರಾಗಿದೆ. ಹಾಗಾಗಿ ಇದೀಗ ಆಪರೇಷನ್ ಕೂಡ ಮಾಡಲಾಗಿದ್ದು, ಇನ್ನೇರಡು ದಿನಗಲ್ಲಿ ವಿನೋದ್ ರಾಜ್ ಡಿಸ್ಚಾರ್ಜ್ ಕೂಡ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿನೋದ್ ರಾಜ್ ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಡ್ಯಾನ್ಸ್ ರಾಜಾ ಡ್ಯಾನ್ಸ್, ಶ್ರೀ ವೆಂಕಟೇಶ್ವರ ಮಹಿಮೆ, ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನನಗು ಹೆಂಡ್ತಿ ಬೇಕು, ಯುದ್ಧ ಪರ್ವ, ನಾಯಕ, ಬನ್ನಿ ಒಂದ್ಸಲಾ ನೋಡಿ, ಗಿಳಿ ಬೇಟೆ ಎಂಬ ಸಿನಿಮಾಗಳಲ್ಲಿ ನಟಿಸಿದ್ದಾರೆ.

ನೆಲಮಂಗಲದಲ್ಲಿ ಕೃಷಿ ಮಾಡುತ್ತಿರುವ ವಿನೋದ್‌ ರಾಜ್‌ ಅವರ ತಾಯಿ ಲೀಲಾವತಿ ಕಳೆದ ಡಿಸೆಂಬರ್‌ನಲ್ಲಿ ನಿಧನರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನುಷ್ಯರು ಬಣ್ಣ ಬದಲಾಯಿಸಿದರೇನು.. ದರ್ಶನ್ ಗೆ ಟಾಂಗ್ ಕೊಟ್ಟರಾ ಪವಿತ್ರಾ ಗೌಡ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ಮುಂದಿನ ಸುದ್ದಿ
Show comments