ಚೆನ್ನೈ: ತಮಿಳುನಾಡಿನಲ್ಲಿ ವಿಲ್ಲುಪುರಂನಲ್ಲಿ ನಡೆದ ಮಿಸ್ ಕೂವಾಗಮ್ ಟ್ರಾನ್ಸ್ ಜೆಂಡರ್ ಬ್ಯೂಟಿ ಕಂಟೆಸ್ಟ್ ಗೆ ಅತಿಥಿಯಾಗಿ ಹೋಗಿದ್ದ ತಮಿಳು ನಟ ವಿಶಾಲ್ ವೇದಿಕೆಯ ಮೇಲೆಯೇ ಕುಸಿದು ಬಿದ್ದಿದ್ದಾರೆ.
ಕಾರ್ಯಕ್ರಮ ನಡೆಯುತ್ತಿದ್ದಾಗಲೇ ನಟ ವಿಶಾಲ್ ಹಠಾತ್ ಆಗಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣವೇ ಕಾರ್ಯಕ್ರಮದ ಆಯೋಜಕರು ವಿಶಾಲ್ ನೆರವಿಗೆ ಧಾವಿಸಿದ್ದಾರೆ. ವಿಶಾಲ್ ರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆಲವು ದಿನಗಳ ಹಿಂದೆ ತಮ್ಮ ಸಿನಿಮಾ ಪ್ರಚಾರ ಕಾರ್ಯಕ್ರಮಕ್ಕೆ ಬಂದಾಗಲೂ ವಿಶಾಲ್ ತೀರಾ ನಡುಗುತ್ತಿದ್ದರು. ಅವರ ಅನಾರೋಗ್ಯದ ಬಗ್ಗೆ ಅನೇಕ ಊಹಾಪೋಹಗಳೆದ್ದಿತ್ತು. ಬಳಿಕ ಗಂಭೀರ ಸಮಸ್ಯೆಯಲ್ಲ ಎಂದು ಪ್ರತಿಕ್ರಿಯಿಸಿದ್ದರು.
ಇದೀಗ ಮತ್ತೆ ವಿಶಾಲ್ ಕುಸಿದು ಬಿದ್ದಿದ್ದಾರೆ. ಇದರ ಬಗ್ಗೆ ಅವರ ಆಪ್ತರು ಪ್ರತಿಕ್ರಿಯಿಸಿದ್ದು ಸರಿಯಾಗಿ ಊಟ ಮಾಡದ ಕಾರಣಕ್ಕೆ ಈ ರೀತಿ ಆಗಿರಬಹುದು. ಗಾಬರಿಪಡುವಂತದ್ದು ಏನೂ ಇಲ್ಲ ಎಂದಿದ್ದಾರೆ.