Select Your Language

Notifications

webdunia
webdunia
webdunia
webdunia

ನಟ ವಿಷ್ಣುವರ್ಧನ್ ಸಮಾಧಿ ಮೈಸೂರಿಗೆ ಶಿಫ್ಟ್

ನಟ ವಿಷ್ಣುವರ್ಧನ್ ಸಮಾಧಿ ಮೈಸೂರಿಗೆ ಶಿಫ್ಟ್
ಬೆಂಗಳೂರು , ಮಂಗಳವಾರ, 5 ಮೇ 2015 (14:42 IST)
ಸಮಾಧಿ ಸ್ಥಳದ ವಿಚಾರದಲ್ಲಿ ಗೊಂದಲ ಉಂಟಾದ ಹಿನ್ನೆಲೆಯಲ್ಲಿ ದಿವಂಗತ ನಟ ಡಾ.ವಿಷ್ಣುವರ್ಧನ್ ಅವರ ಪತ್ನಿ ಭಾರತಿ ವಿಷ್ಣುವರ್ಧನ್ ಅವರು ಮೇ 1ರಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಮಾಧಿಯನ್ನು ಮೈಸೂರಿಗೆ ಸ್ಥಳಾಂತರಿಸುವಂತೆ ಮನವಿ ಮಾಡಿದ್ದಾರೆ. 
 
ಮಾಧ್ಯಮಗಳೊಂದಿಗೆ ಮಾತನಾಡಿದ ಭಾರತಿ ವಿಷ್ಣುವರ್ಧನ್, ಕಳೆದ ಮೇ 1ರಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತನ್ನ ಪತಿಯ ಸಮಾಧಿಯನ್ನು ಮೈಸೂರಿಗೆ ಸ್ಥಳಾಂತರಿಸುವಂತೆ ಮನವಿ ಮಾಡಿದ್ದೇನೆ. ಅಲ್ಲದೆ ಸಿಎಂ ಸಿದ್ದರಾಮಯ್ಯನವರೂ ಕೂಡ ಈಗಾಗಲೇ ಮೈಸೂರು ಜಿಲ್ಲಾಧಿಕಾರಿ ಶಿಖಾ ಅವರಿಗೆ ಜಾಗ ಪರಿಶೀಲನೆಗೆ ಸೂಚಿಸಿದ್ದಾರೆ ಎಂದು ತಿಳಿಸಿದರು. 
 
ಈ ಹಿಂದೆ ನಗರದ ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣು ಅವರ ಸಮಾಧಿಯನ್ನು ಸ್ಮಾರಕವನ್ನಾಗಿ ನಿರ್ಮಿಸಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಭೂ ವಿವಾದ ಉಂಟಾಗಿತ್ತು. ಅಲ್ಲದೆ ಸ್ಮಾರಕಕ್ಕಾಗಿ ಬಳಸಿಕೊಳ್ಳಲಾಗುವ ಜಾಗ ಅರಣ್ಯ ಇಲಾಖೆಗೆ ಸಂಬಂಧಿಸಿದ್ದಾಗಿದ್ದು, ಇತರೆ ಕೆಲಸಗಳಿಗೆ ಬಳಸಿಕೊಳ್ಳುವುದು ಅಪರಾಧ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತಿ ವಿಷ್ಣುವರ್ಧನ್ ಅವರು ಸಮಾಧಿಯನ್ನೇ ಸ್ಥಳಾಂತರಿಸಲು ನಿರ್ಧರಿಸಿದ್ದಾರೆ. 

Share this Story:

Follow Webdunia kannada