Webdunia - Bharat's app for daily news and videos

Install App

ಸಿದ್ಧಾರ್ಥ್ ಜೊತೆ ಮದುವೆ ವದಂತಿಗಳಿಗೆ ಸ್ಪಷ್ಟನೆ ನೀಡಿದ ನಟಿ ಅದಿತಿ ರಾವ್ ಹೈದರಿ

Krishnaveni K
ಗುರುವಾರ, 28 ಮಾರ್ಚ್ 2024 (16:57 IST)
ಹೈದರಾಬಾದ್: ಬಾಲಿವುಡ್ ನಟಿ ಅದಿತಿ ರಾವ್ ಹೈದರಿ ಮತ್ತು ಟಾಲಿವುಡ್ ನಟ ಸಿದ್ಧಾರ್ಥ್ ಗುಟ್ಟಾಗಿ ಮದುವೆಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿರುವ ಶ್ರೀರಂಗಪುರಂನಲ್ಲಿರುವ ಶ್ರೀ ರಂಗನಾಯಕ ಸ್ವಾಮಿ ದೇವಾಲಯದಲ್ಲಿ ಈ ಜೋಡಿ ಮದುವೆಯಾಗಿದೆ ಎಂದು ನಿನ್ನೆ ಸುದ್ದಿ ಓಡಾಡಿತ್ತು. ಕೆಲವು ಫೋಟೋಗಳೂ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಈ ನಡುವೆ ತಮ್ಮ ಮದುವೆ ಸುದ್ದಿ ಬಗ್ಗೆ ಸುದ್ದಿ ಓಡಾಡುತ್ತಿದ್ದಂತೇ ಅದಿತಿ ಸ್ಪಷ್ಟನೆ ನೀಡಿದ್ದಾರೆ. ಸಿದ್ಧಾರ್ಥ್ ಜೊತೆಗಿನ ಫೋಟೋ ಹಂಚಿಕೊಂಡಿರುವ ಅದಿತಿ ತಾವಿಬ್ಬರೂ ಎಂಗೇಜ್ ಮೆಂಟ್ ಮಾಡಿಕೊಂಡಿರುವುದಾಗಿ ಹೇಳಿದ್ದಾರೆ. ಈ ಮೂಲಕ ತಮ್ಮದು ಮದುವೆಯಲ್ಲ, ನಿಶ್ಚಿತಾರ್ಥವಾಗಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ.

ಈ ಜೋಡಿ ಹಲವು ದಿನಗಳಿಂದ ಡೇಟಿಂಗ್ ಮಾಡುತ್ತಿದೆ. ಇತ್ತೀಚೆಗೆ ಇಬ್ಬರೂ ತಮ್ಮ ಫೋಟೋ ಹಂಚಿಕೊಂಡು ತಮ್ಮ ಸಂಬಂಧವನ್ನು ಜಗಜ್ಜಾಹೀರು ಮಾಡಿದ್ದರು. ಇದೀಗ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಸದ್ಯದಲ್ಲೇ ಮದುವೆ ಮಾಡಿಕೊಳ್ಳುತ್ತಿರುವುದಾಗಿ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಬಾಸ್ ಫ್ಯಾನ್ಸ್ ರಮ್ಯಾ ಕದನಕ್ಕೆ ಶಿವಣ್ಣನ ಎಂಟ್ರಿ, ಹೇಳಿದ್ದೇನು ಗೊತ್ತಾ

ಡಿ ಕಂಪನಿ ಅಲ್ಲ ಥೂ.. ಡುಬಾಕ್, ದಾವೂದ್ ಕಂಪನಿ ಅದು: ಡಿಬಾಸ್ ಫ್ಯಾನ್ಸ್ ವಿರುದ್ಧ ರೊಚ್ಚಿಗೆದ್ದ ಪ್ರಥಮ್

ರಮ್ಯಾ ಕಂಪ್ಲೇಂಟ್ ಬೆನ್ನಲ್ಲೇ ಚುರುಕಾದ ಪೊಲೀಸರು: ಡಿಬಾಸ್ ಫ್ಯಾನ್ಸ್ ಅಕೌಂಟ್ ಗೆ ಗುನ್ನ

ಸು ಫ್ರಮ್ ಸೋ ಮೂವಿ ಬಜೆಟ್ ಎಷ್ಟಿತ್ತು, ಗಳಿಸಿದ್ದೆಷ್ಟು ನೋಡಿದರೆ ಅಚ್ಚರಿಯಾಗ್ತೀರಿ

ಫಸ್ಟ್ ಟೈಂ ರಿಯಾಲಿಟಿ ಶೋ ಜಡ್ಜ್ ಆಗಿ ಅಮೂಲ್ಯ: ಬೆಸ್ಟ್ ಆಯ್ಕೆ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments