Webdunia - Bharat's app for daily news and videos

Install App

ಮದುವೆಯಾದ ಏಳೇ ತಿಂಗಳಲ್ಲಿ ಗಂಡು ಮಗುವಿಗೆ ಜನ್ಮನೀಡಿದ ಬಹುಭಾಷಾ ನಟಿ ಆ್ಯಮಿ ಜಾಕ್ಸನ್‌

Sampriya
ಮಂಗಳವಾರ, 25 ಮಾರ್ಚ್ 2025 (14:46 IST)
Photo Courtesy X
ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿಟ್‌ ಸಿನಿಮಾ ದಿ ವಿಲನ್‌ ಚಿತ್ರದ ನಟಿ, ಬ್ರಿಟನ್‌ ಮೂಲದ ಆ್ಯಮಿ ಜಾಕ್ಸನ್‌ ಅವರು ಗಂಡು ಮಗುವಿಗೆ ತಾಯಿಯಾದ ಸಂಭ್ರಮದಲ್ಲಿದ್ದಾರೆ.

ಈ ಗುಡ್ ನ್ಯೂಸ್ ಅನ್ನು ಇದೀಗ ಸೋಶಿಯಲ್ ಮೀಡಿಯಾದಲ್ಲಿ ನಟಿ ಹಂಚಿಕೊಂಡಿದ್ದಾರೆ.  ಜಗತ್ತಿಗೆ ಸ್ವಾಗತ, ಆಸ್ಕರ್‌ ಅಲೆಕ್ಸಾಂಡರ್‌ ವೆಸ್ಟ್‌ವಿಕ್‌ ಎಂದು ಇನ್‌ಸ್ಟಾಗ್ರಾಂನಲ್ಲಿ ಮುದ್ದಾದ ಮಗುವಿನ ಚಿತ್ರದೊಂದಿಗೆ ಪೋಸ್ಟ್‌ ಮಾಡಿದ್ದಾರೆ.

ಕನ್ನಡ ಸೇರಿದಂತೆ ಟಾಲಿವುಡ್‌, ಕಾಲಿವುಡ್‌ ಮತ್ತು ಬಾಲಿವುಡ್‌ನಲ್ಲಿ ಹಲವು ಚಿತ್ರಗಳಿಗೆ ಬಣ್ಣ ಹೆಚ್ಚಿದ್ದ ಆ್ಯಮಿ ಅವರು ಕಳೆದ ವರ್ಷ ಜನವರಿಯಲ್ಲಿ ಹಾಲಿವುಡ್ ನಟ ಎಡ್‌ ವೆಸ್ಟ್‌ವಿಕ್‌ ಅವರೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

ಕಳೆದ ಆಗಸ್ಟ್ 24ರಂದು ಇಟಲಿಯಲ್ಲಿ ಅದ್ಧೂರಿ ಕಾರ್ಯಕ್ರಮದಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಆ್ಯಮಿ ಜಾಕ್ಸನ್‌ ಮತ್ತು ಅವರ ಮಾಜಿ ಪ್ರಿಯಕರ ಜಾರ್ಜ್‌ ಪನಾಯಿಟೊ ಅವರಿಗೆ 6 ವರ್ಷದ ಪುತ್ರ ಇದ್ದಾನೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments