Webdunia - Bharat's app for daily news and videos

Install App

ನಟಿ ಬಿ. ಸರೋಜಾ ದೇವಿ ನೆನಪಿಗೆ ವಿಶೇಷ ಗೌರವ ನೀಡಲು ಮುಂದಾದ ರಾಜ್ಯ ಸರ್ಕಾರ

Sampriya
ಮಂಗಳವಾರ, 15 ಜುಲೈ 2025 (19:52 IST)
ಬೆಂಗಳೂರು: ಸೋಮವಾರ ದೈವಾಧೀನರಾದ ಬಹುಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸಿಸುತ್ತಿದ್ದ ರಸ್ತೆಗಿಡುವ ಬಗ್ಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಜೊತೆ ಚರ್ಚಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಅವರು ಮಾಹಿತಿ ನೀಡಿದ್ದಾರೆ.

‘ಬಿ.ಸರೋಜಾದೇವಿ ಒಬ್ಬ ಮೇರು ನಟಿ. ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ. ಅನೇಕ ಬಾರಿ ಸರೋಜಾದೇವಿ ಅವರನ್ನು ಭೇಟಿ ಮಾಡಿದ್ದೇನೆ. ಎಲ್ಲರೊಂದಿಗೆ ಆತ್ಮೀಯವಾಗಿ,
ಪ್ರೀತಿಯಿಂದ ಮಾತನಾಡುತ್ತಿದ್ದರು. ಅವರ ನಿಧನ ಇಡೀ ಚಿತ್ರರಂಗಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

‘ಚಿಕ್ಕವಯಸ್ಸಿನಲ್ಲಿಯೇ ಸಿನಿಮಾರಂಗವನ್ನು ಪ್ರವೇಶಿಸಿ ಏಳು ದಶಕಗಳ ಕಾಲ ಕಲಾವಿದೆಯಾಗಿದ್ದವರು. ‘ಅಭಿನವ ಸರಸ್ವತಿ’ ಎಂಬ ಬಿರುದು ಚಿಕ್ಕವಯಸ್ಸಿಗೆ ದೊರೆತಿತ್ತು. ಸರೋಜಾದೇವಿ ಅವರು ಯಾವುದೇ ಪಾತ್ರಕ್ಕೂ ಜೀವ ತುಂಬುತ್ತಿದ್ದರು. ಖಾಸಗಿ ಜೀವನದಲ್ಲಿಯೂ ಶಿಸ್ತುಬದ್ಧ ಜೀವನವನ್ನು ನಡೆಸಿದವರು’ ಎಂದಿದ್ದಾರೆ.

‘ಕನ್ನಡ ಚಿತ್ರರಂಗ ಬೆಳೆಯಲು ಅಪಾರ ಕೊಡುಗೆಯನ್ನು ಕೊಟ್ಟಿದ್ದಾರೆ. ಅವರ ಸಾವಿನಿಂದ ಚಿತ್ರರಂಗಕ್ಕೆ ಅಪಾರವಾದ ನಷ್ಟವಾಗಿದೆ. ಸರೋಜಾದೇವಿ ಅವರ ಹೆಸರನ್ನು ಅವರು ವಾಸಿಸುತ್ತಿದ್ದ ರಸ್ತೆಗೆ ಇಡುವ ಬಗ್ಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜೊತೆ ಚರ್ಚಿಸುತ್ತೇನೆ’ ಎಂದು ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಬಿ. ಸರೋಜಾ ದೇವಿ ನೆನಪಿಗೆ ವಿಶೇಷ ಗೌರವ ನೀಡಲು ಮುಂದಾದ ರಾಜ್ಯ ಸರ್ಕಾರ

ದಿ ಡೆವಿಲ್ ಸಿನಿಮಾ ತಂಡದಿಂದ ದರ್ಶನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಹರ್ಷಿತಾ, ಸೀಮಂತದ ಫೋಟೋ ಹಂಚಿ ಕುಡ್ಲದ ಹುಡುಗಿ ಎಂದ ಗಂಗಾ ಪಾತ್ರದಾರಿ

ಸ್ಟಂಟ್ ಮ್ಯಾನ್ ಮೋಹನ್ ರಾಜ್ ಸಾವು, ನಿರ್ದೇಶಕ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌

ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ ಸರೋಜಾದೇವಿ ಅಂತ್ಯಕ್ರಿಯೆ

ಮುಂದಿನ ಸುದ್ದಿ
Show comments