Publish Date: Mon, 19 Sep 2022 (10:40 IST)
Updated Date: Mon, 19 Sep 2022 (10:52 IST)
ಚೆನ್ನೈ: ತಮಿಳು ಸಿನಿಮಾ ರಂಗದ ಯುವ ನಟಿ ದೀಪಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 29 ವರ್ಷ ವಯಸ್ಸಾಗಿತ್ತು.
ಚೆನ್ನೈನ ಹೊರವಲಯದಲ್ಲಿರುವ ತಮ್ಮ ಅಪಾರ್ಟ್ ಮೆಂಟ್ ನಲ್ಲಿ ದೀಪಾ ಮೃತದೇಹ ಪತ್ತೆಯಾಗಿದೆ. ಕುಟುಂಬಸ್ಥರು ಕರೆ ಮಾಡಿದರೂ ಪ್ರತಿಕ್ರಿಯಿಸದೇ ಹೋದಾಗ ಅನುಮಾನಗೊಂಡು ಅಪಾರ್ಟ್ ಮೆಂಟ್ ಗೆ ತೆರಳಿ ನೋಡಿದಾಗ ಮೃತದೇಹ ಪತ್ತೆಯಾಗಿದೆ.
ಪ್ರೇಮ ವೈಫಲ್ಯ ಮತ್ತು ಸಿನಿಮಾಗಳಲ್ಲೂ ಯಶಸ್ಸು ಸಿಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.