ಚೆನ್ನೈ: ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ನಟಿಸಿ ಮನೆ ಮಾತಾಗಿರುವ ನಟಿ ಮೀನಾ ಪತಿ ವಿದ್ಯಾಸಾಗರ್ ನಿಧನರಾಗಿದ್ದಾರೆ.
									
			
			 
 			
 
 			
			                     
							
							
			        							
								
																	ಕೊವಿಡ್ ನಿಂದ ಇತ್ತೀಚೆಗಷ್ಟೇ  ಚೇತರಿಸಿಕೊಂಡಿದ್ದ ವಿದ್ಯಾಸಾಗರ್ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
									
										
								
																	ಬೆಂಗಳೂರು ಮೂಲದ ಉದ್ಯಮಿಯಾಗಿರುವ ವಿದ್ಯಾಸಾಗರ್ ಜೊತೆ ಮೀನಾ 2009 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ ಓರ್ವ ಪುತ್ರಿಯೂ ಇದ್ದಾಳೆ. ಶ್ವಾಸಕೋಶ ಬದಲಿ ಶಸ್ತ್ರಚಿಕಿತ್ಸೆ ನಡೆಸಲು ವೈದ್ಯರು ಪ್ರಯತ್ನ ನಡೆಸಿದ್ದರು. ಆದರೆ ಸೂಕ್ತ ಸಮಯದಲ್ಲಿ ದಾನಿಗಳು ಸಿಗದೇ ವಿದ್ಯಾಸಾಗರ್ ಮೃತಪಟ್ಟಿದ್ದಾರೆ.