Select Your Language

Notifications

webdunia
webdunia
webdunia
webdunia

ಡ್ರಗ್ಸ್ ಕೇಸ್ ನಿಂದ ನಟಿ ರಾಗಿಣಿ ದ್ವಿವೇದಿ ಬಚಾವ್, ದೊಡ್ಡ ಕಳಂಕ ತೊಳೆದೇ ಹೋಯ್ತು

Ragini Dwivedi

Krishnaveni K

ಬೆಂಗಳೂರು , ಮಂಗಳವಾರ, 14 ಜನವರಿ 2025 (09:25 IST)
ಬೆಂಗಳೂರು: ಡ್ರಗ್ಸ್ ಕೇಸ್ ನಲ್ಲಿ ಸಿಲುಕಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಮೇಲಿನ ಪ್ರಕರಣ ಸಾಕ್ಷ್ಯಾಧಾರ ಕೊರತೆಯಿಂದ ಖುಲಾಸೆಗೊಂಡಿದೆ. ಇದರೊಂದಿಗೆ ಅವರ ವೃತ್ತಿ ಜೀವನಕ್ಕೆ ಎದುರಾಗಿದ್ದ ದೊಡ್ಡ ಕಳಂಕ ತೊಳೆದು ಹೋದಂತಾಗಿದೆ.

2020 ರಲ್ಲಿ ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಕೇಸ್ ಭಾರೀ ಸದ್ದು ಮಾಡಿತ್ತು. ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ವಿರುದ್ಧ ಆರೋಪ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಇಬ್ಬರನ್ನೂ ಬಂಧಿಸಲಾಗಿತ್ತು. ಇಬ್ಬರೂ ನಟಿಯರು ಪರಪ್ಪನ ಅಗ್ರಹಾರದಲ್ಲಿ ಕೆಲವು ದಿನ ಕಳೆದಿದ್ದರು.

ಇದಾದ ಬಳಿಕ ಜಾಮೀನು ಪಡೆದು ಹೊರಬಂದಿದ್ದರು. ಆದರೂ ಈ ಪ್ರಕರಣ ರಾಗಿಣಿ ವೃತ್ತಿ ಜೀವನಕ್ಕೂ ಸಾಕಷ್ಟು ಹೊಡೆತ ನೀಡಿತ್ತು. ಇದೀಗ ನಟಿಯ ವಿರುದ್ಧ ಯಾವುದೇ ಸಾಕ್ಷ್ಯಾಧಾರ ಸಿಗದ ಹಿನ್ನಲೆಯಲ್ಲಿ ನಿರಪರಾಧಿ ಎಂದು ಹೈಕೋರ್ಟ್ ಖುಲಾಸೆಗೊಳಿಸಿದೆ.

ಡ್ರಗ್ಸ್ ಮಾಫಿಯಾದೊಂದಿಗೆ ರಾಗಿಣಿಗೆ ಸಂಪರ್ಕವಿತ್ತು. ಪಾರ್ಟಿ ನಡೆಸಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು ಎಂದೆಲ್ಲಾ ಆರೋಪಗಳಿತ್ತು. ಎನ್ ಡಿಪಿಎಸ್ ಆಕ್ಟ್ ಅಡಿಯಲ್ಲಿ ನಟಿ ವಿರುದ್ಧ ಕೇಸ್ ದಾಖಲಾಗಿತ್ತು. ಆದರೆ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯ ನೀಡಿಲ್ಲ ಎಂದು ನಟಿ ಪರ ವಕೀಲ ಮೊಹಮ್ಮದ್ ತಾಹಿರ್ ವಾದ ಮಂಡಿಸಿದ್ದರು. ಅವರ ವಾದವನ್ನು ಕೋರ್ಟ್ ಅಂಗೀಕರಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಾಮರಾಜಪೇಟೆ ದನದ ಕೆಚ್ಚಲು ಕೊಯ್ದ ಈ ನನ್ಮಕ್ಳನ್ನು ಪಬ್ಲಿಕ್ ಆಗಿ ಸಾಯ್ಸಿಬಿಡ್ಬೇಕು: ನಿರ್ದೇಶಕ ಪ್ರೇಮ್