Webdunia - Bharat's app for daily news and videos

Install App

ಉತ್ತರಕಾಂಡ ಸಿನಿಮಾಗೂ ಕೈಕೊಟ್ಟ ನಟಿ ರಮ್ಯಾ

Krishnaveni K
ಮಂಗಳವಾರ, 26 ಮಾರ್ಚ್ 2024 (17:07 IST)
Photo Courtesy: Twitter
ಬೆಂಗಳೂರು: ಮೋಹಕತಾರೆ ರಮ್ಯಾ ಉತ್ತರಕಾಂಡ ಸಿನಿಮಾ ಮೂಲಕ ನಟನೆಗೆ ಕಮ್ ಬ್ಯಾಕ್ ಮಾಡಲಿದ್ದಾರೆ ಎಂದು ಈ ಮೊದಲು ಘೋಷಿಸಿದ್ದರು. ಆದರೆ ಇದೀಗ ಸಿನಿಮಾದಿಂದ ಹೊರಬಂದಿದ್ದಾರೆ.

ಡಾಲಿ ಧನಂಜಯ್ ನಾಯಕರಾಗಿರುವ ಉತ್ತರಕಾಂಡ ಸಿನಿಮಾದಲ್ಲೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡಾ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೂಲಕ ರಮ್ಯಾ ಮತ್ತೆ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡಲು ಸಿದ್ಧತೆ ನಡೆಸಿದ್ದರು. ಸಿನಿಮಾದ ಮುಹೂರ್ತ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದರು.

ಆದರೆ ಇದೀಗ ಈ ಸಿನಿಮಾದಿಂದ ಹೊರಬಂದಿರುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಆ ಮೂಲಕ ಅವರ ಕಮ್ ಬ್ಯಾಕ್ ಎದಿರು ನೋಡುತ್ತಿದ್ದ ಫ್ಯಾನ್ಸ್ ಗೆ ನಿರಾಸೆ ಆಗಿದೆ. ಈ ಮೊದಲು ರಾಜ್ ಬಿ ಶೆಟ್ಟಿ ನಿರ್ದೇಶಿಸಿ, ನಟಿಸಿದ್ದ ‘ಸ್ವಾತಿ ಮುತ್ತಿನ ಮಳೆ ಹನಿಯೆ’ ಸಿನಿಮಾದಲ್ಲೂ ರಮ್ಯಾ ಕೊನೆಯ ಕ್ಷಣದಲ್ಲಿ ಹಿಂದೆ ಸರಿದಿದ್ದರು. ಬಳಿಕ ಆ ಸಿನಿಮಾದ ನಿರ್ಮಾಪಕಿಯಾಗಿದ್ದರು.

ಆದರೆ ಈಗ ಉತ್ತರಕಾಂಡದಿಂದಲೂ ಹೊರಬಂದಿದ್ದಾರೆ. ‘ಡೇಟ್ಸ್ ಹೊಂದಾಣಿಕೆ ಆಗದ ಕಾರಣ ಉತ್ತರಕಾಂಡ ಸಿನಿಮಾದಲ್ಲಿ ನಾನು ನಟಿಸುತ್ತಿಲ್ಲ. ನನ್ನ ಸಿನಿಮಾ ಮತ್ತು ರಾಜಕೀಯ ಕೆಲಸಗಳನ್ನು ಸದ್ಯಕ್ಕೆ ಕಾದಿರಿಸಿದ್ದೇನೆ. ಚಿತ್ರತಂಡಕ್ಕೆ ಶುಭವಾಗಲಿ’ ಎಂದು ಬರೆದುಕೊಂಡಿದ್ದಾರೆ. ಈ ನಡುವೆ ರಮ್ಯಾ ಲೋಕಸಭೆ ಚುನಾವಣೆ ಪ್ರಚಾರಕ್ಕಿಳಿಯುತ್ತಾರೆ ಎಂಬ ಸುದ್ದಿಗಳಿತ್ತು. ಅದೇ ಕಾರಣಕ್ಕೆ ಸಿನಿಮಾದಿಂದ ಹೊರಬಂದಿದ್ದಾರಾ ಗೊತ್ತಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments