Publish Date: Tue, 11 Jun 2024 (14:30 IST)
Updated Date: Tue, 11 Jun 2024 (14:32 IST)
ಬೆಂಗಳೂರು: ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅರೆಸ್ಟ್ ಆಗಿರುವ ಕುರಿತು ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಮಾಡಿರುವ ಪೋಸ್ಟ್ ಈಗ ವೈರಲ್ ಆಗಿದೆ.
ರಮ್ಯಾ ಇತ್ತೀಚೆಗಿನ ದಿನಗಳಲ್ಲಿ ಚಿತ್ರರಂಗದಿಂದ ದೂರವೇ ಇದ್ದಾರೆ. ತೀರಾ ಇತ್ತೀಚೆಗಷ್ಟೇ ಸ್ವಾತಿ ಮುತ್ತಿನ ಮಳೆ ಹನಿಯೆ ಎನ್ನುವ ಸಿನಿಮಾ ನಿರ್ಮಿಸಿದ್ದು ಬಿಟ್ಟರೆ ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿದ್ದಾರೆ. ಆದರೆ ಇದೀಗ ತಮ್ಮ ಸಿನಿಮಾದ ಹೀರೋ ಆಗಿದ್ದ ದರ್ಶನ್ ಅರೆಸ್ಟ್ ಆಗಿರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಬಿಡುಗಡೆ ಮಾಡಿದ್ದಾರೆ.
ರಮ್ಯಾ ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಆಗಾಗ ಪೋಸ್ಟ್ ಮಾಡುತ್ತಿರುತ್ತಾರೆ. ಇದೀಗ ದರ್ಶನ್ ಅರೆಸ್ಟ್ ಆಗಿರುವ ಸುದ್ದಿಯ ಪೋಸ್ಟ್ ನ್ನು ರಮ್ಯಾ ರಿಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ನಲ್ಲಿ ದರ್ಶನ್ ಗೆ ಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯಾಗಲಿದೆ. ಒಂದು ವೇಳೆ ಈ ಪ್ರಕರಣದಲ್ಲಿ ದರ್ಶನ್ ತಪ್ಪಿಸಿಕೊಂಡರೆ ಅದು ಹಣಬಲ ಮತ್ತು ಪ್ರಭಾವದ ಮೇಲುಗೈ ಆಗಲಿದೆ ಎಂದು ಬರೆಯಲಾಗಿದೆ. ಇದನ್ನು ರಮ್ಯಾ ರಿ ಟ್ವೀಟ್ ಮಾಡಿದ್ದಾರೆ.
ಇದುವರೆಗೆ ಸ್ಯಾಂಡಲ್ ವುಡ್ ನ ಯಾವ ನಟರೂ ದರ್ಶನ್ ಅರೆಸ್ಟ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿಲ್ಲ. ದರ್ಶನ್ ಆಪ್ತರೂ ಪ್ರಕರಣದ ಬಗ್ಗೆ ಮೌನವಹಿಸಿದ್ದಾರೆ. ಆದರೆ ರಮ್ಯಾ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ.