Publish Date: Mon, 22 Nov 2021 (10:07 IST)
Updated Date: Mon, 22 Nov 2021 (10:16 IST)
ಬೆಂಗಳೂರು: ಕಿರುತೆರೆಯ ಖ್ಯಾತ ನಟಿ ರಶ್ಮಿ ಪ್ರಭಾಕರ್ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ತಮ್ಮ ಮದುವೆ ವಿಚಾರವನ್ನು ನಟಿ ವಿಶಿಷ್ಟವಾಗಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಲಕ್ಷ್ಮಿ ಬಾರಮ್ಮ, ಮನಸೆಲ್ಲಾ ನೀನೆ ಮುಂತಾದ ಕನ್ನಡ ಧಾರವಾಹಿ ಮಾತ್ರವಲ್ಲದೆ ತೆಲುಗಿನಲ್ಲೂ ಅಭಿನಯಿಸಿ ತಮ್ಮದೇ ಅಭಿಮಾನಿ ಬಳಗವನ್ನು ಹೊಂದಿರುವ ರಶ್ಮಿ ಪ್ರಭಾಕರ್ ತಮ್ಮ ಮದುವೆ ವಿಚಾರವನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.
ತಮ್ಮ ಹುಡುಗನ ಜೊತೆ ಫೋಟೋ ಶೂಟ್ ಮಾಡಿಸಿಕೊಂಡಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಆದರೆ ತಮ್ಮ ಹುಡುಗನ ಬಗ್ಗೆ ಇನ್ನೂ ಗುಟ್ಟು ಬಿಟ್ಟುಕೊಟ್ಟಿಲ್ಲ.