Select Your Language

Notifications

webdunia
webdunia
webdunia
webdunia

ಬಾಲಿವುಡ್‌ನಲ್ಲಿ ಬಂಪರ್ ಆಫರ್ ಗಿಟ್ಟಿಸಿಕೊಂಡ ನಟಿ ಸಮಂತಾ

samantha

Sampriya

ಮುಂಬೈ , ಭಾನುವಾರ, 23 ಜೂನ್ 2024 (19:06 IST)
photo Courtesy Instagram
ಮುಂಬೈ:  ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾಗಿರುವ ಸಮಂತಾ ಅವರು ಇದೀಗ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.  

ಬಾಲಿವುಡ್ ಚಿತ್ರವೊಂದಕ್ಕೆ ನಾಯಕಿಯಾಗಿ ಸಮಂತಾ ಸಹಿ ಹಾಕಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿದೆ. ಶೀಘ್ರದಲ್ಲೇ ಅಧಿಕೃತ ಘೋಷಣೆಯಾಗಲಿದ್ದು, ವಿಶೇಷ ಏನೆಂದರೆ ಸ್ಟಾರ್ ನಟನ ಜತೆ ಸಮಂತಾ ರೊಮ್ಯಾನ್ಸ್ ಮಾಡಲಿದ್ದಾರೆ.

ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಅವರು ನಾಯಕನಾಗಿ ನಟಿಸಲಿರುವ ಚಿತ್ರಕ್ಕೆ ಸಮಂತಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆಂಬ ಮಾಹಿತಿಯಿದೆ. ಈ ಮೂಲಕ ಸಮಂತಾ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಚಿತ್ರತಂಡದಿಂದ ಅಧಿಕೃತ ಘೋಷಣೆಯಾಗಬೇಕಿದೆ.

ದಕ್ಷಿಣ ಭಾರತದ ಚಲನಚಿತ್ರಗಳಲ್ಲಿ ತನ್ನ ಸಕ್ರಿಯ ವೃತ್ತಿಜೀವನದ ಹೊರತಾಗಿ, ಸಮಂತಾ ವಿವಿಧ ಬಾಲಿವುಡ್ ವೆಬ್ ಸರಣಿಗಳಲ್ಲಿ ನಟಿಸಿದ್ದಾರೆ ಮತ್ತು "ವಿನ್ನೈತಾಂಡಿ ವರುವಾಯಾ" ದ ಹಿಂದಿ ರಿಮೇಕ್‌ನಲ್ಲಿ ನಿರ್ದಿಷ್ಟವಾಗಿ ಕಾಣಿಸಿಕೊಂಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಅಕ್ಕಂಗೆ ಜೈಲಲ್ಲೂ ಮೇಕಪ್ ಕಿಟ್: ಪವಿತ್ರಾ ಗೌಡ ಟ್ರೋಲ್