Select Your Language

Notifications

webdunia
webdunia
webdunia
webdunia

ಅನಾರೋಗ್ಯದ ಹುಲಿಯನ್ನು ದತ್ತು ಪಡೆದ ನಟಿ ಸಂಯುಕ್ತ ಹೊರನಾಡು

Actress Samyukta Horanadu

Sampriya

ಬೆಂಗಳೂರು , ಶನಿವಾರ, 31 ಆಗಸ್ಟ್ 2024 (14:12 IST)
Photo Courtesy X
ಬೆಂಗಳೂರು: ಸ್ಯಾಂಡಲ್‌ವುಡ್‌ನ ನಟಿ ಸಂಯುಕ್ತಾ ಹೊರನಾಡು ಪ್ರಾಣಿ ಪ್ರಿಯೆ. ಅವರಿಗೆ ನಾಯಿ ನಾಯಿ, ಮೊಲ ಎಂದರೆ ಎಲ್ಲಿಲ್ಲದ ಪ್ರೀತಿ. ಪ್ರಾಣ ಅನಿಮಲ್ ಫೌಂಡೇಷನ್ ಅಡಿಯಲ್ಲಿ ಪ್ರಾಣಿಗಳ ರಕ್ಷಣೆಗೆ ಆಂಬುಲೆನ್ಸ್ ಸೇವೆ ಒದಗಿಸುವ ಮೂಲಕ ಪ್ರಾಣಿ ಪ್ರಿಯರ ಮೆಚ್ಚುಗೆ ಪಡೆದಿರುವ ಇವರು ಇದೀಗ ಮತ್ತೊಂದು ಸಾಹಸ ಮೆರೆದಿದ್ದಾರೆ.

ಸಂಯುಕ್ತ ಹೊರನಾಡು ಅವರು ತಮ್ಮದೇ ಪ್ರಾಣ ಹಾಗೂ ಟೆಕೆಯಾನ್ ಸಹಯೋಗದಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹುಲಿಯನ್ನು ದತ್ತು ಪಡೆದಿದ್ದಾರೆ. 28 ತಿಂಗಳ ಸಿಂಚನ ಎಂಬ ಹೆಣ್ಣು ಹುಲಿ‌ ಮರಿಯನ್ನು ದತ್ತು ಪಡೆದಿದ್ದಾರೆ.

ಈ ಹುಲಿಯು ನರದೌರ್ಬಲ್ಯ ಸಮಸ್ಯೆ ಎದುರಿಸುತ್ತಿರುವುದರಿಂದ ಕಾಡಿನಲ್ಲಿ ಸ್ವಾತಂತ್ರ್ಯವಾಗಿ ವಾಸಿಸಲು ಕಷ್ಟ ಸಾಧ್ಯವಾಗಿರುವುದರಿಂದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಂರಕ್ಷಣಾ ಕೇಂದ್ರ ಕಾಳಜಿ ವಹಿಸಲಾಗುತ್ತಿದೆ. ದತ್ತು ಸ್ವೀಕೃತಿಯಲ್ಲಿ ಅದರ ದಿನನಿತ್ಯದ ಆಹಾರ, ನಿರ್ವಹಣೆ ಮತ್ತು ಪಶು ಚಿಕಿತ್ಸಾವನ್ನು ಭರಿಸಲಾಗುತ್ತದೆ.

ಟೆಕೆಯಾನ್ ನಮ್ಮ ಜೊತೆ ಕೈ ಜೋಡಿಸಿರುವುದು ಖುಷಿ ಕೊಟ್ಟಿದೆ. ತೊಂದರೆ ಒಳಗಾದ ಪ್ರಾಣಿಗಳನ್ನು ದತ್ತು ಸ್ವೀಕರಿಸದಕ್ಕೆ ಟೆಕೆಯಾನ್‌ಗೆ ಧನ್ಯವಾದ ಎಂದು ಸಂಯುಕ್ತ ಹೊರನಾಡು ಹೇಳಿದರು.

ಟೆಕೆಯಾನ್ ಹಾಗೂ ಪ್ರಾಣ ಸಂಸ್ಥೆ ಜೊತೆಗೂಡಿ ದಿನದ 24 ಘಂಟೆ ಪ್ರಾಣಿಗಳ ರಕ್ಷಣೆಗೆ ಆಂಬ್ಯುಲೆನ್ಸ್ ಸೇವೆ ಒದಗಿಸಿದೆ. ಇದೂವರೆಗೆ 500 ಪ್ರಾಣಿಗಳನ್ನು ಈ ಸಂಸ್ಥೆ ರಕ್ಷಣೆ ಮಾಡಿವೆ. ಕನಕಪುರ ರಸ್ತೆಯಲ್ಲಿ ಟೆಕೆಯಾನ್ ಸಂಸ್ಥೆ ಪ್ರಾಣಿ ರಕ್ಷಣೆಗೆ ಪುನರ್ ವಸತಿ ಕೇಂದ್ರ ಸ್ಥಾಪಿಸಿಕೊಟ್ಟಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಿಕ್ಸ್ ಪ್ಯಾಕ್ ವಿಚಾರದಲ್ಲಿ ಕನ್ನಡದ ಸಲ್ಮಾನ್ ಖಾನ್ ಯಾರು ಗೊತ್ತಾ