Publish Date: Thu, 12 Oct 2017 (19:32 IST)
Updated Date: Thu, 12 Oct 2017 (19:34 IST)
ಸ್ಯಾಂಡಲ್‌ವುಡ್ ನಟಿ ಸಂಜನಾ ಸೇರಿದಂತೆ ಹಲವರಿಗೆ ಕೋಟಿಗಟ್ಟಲೆ ವಂಚಿಸಿದ್ದ ದಂಪತಿಗಳು ಇದೀಗ ಎಸ್ಕೇಪ್ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತಾ ಪ್ರಕರಣನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದ್ದಾರೆ.
ಆರೋಪಿ ದಂಪತಿಗಳು ನಡೆಸುತ್ತಿದ್ದ ಚಿಟ್ ಫಂಡ್, ವಂಚನೆಗೈದ ಕುರಿತಂತೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.
ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಪ್ರಸಿದ್ಧಿ ಚಿಟ್‌ಫಂಡ್ ಮಾಲೀಕರಾದ ಮಹೇಶ್ ಮತ್ತು ಅವರ ಪತ್ನಿ ನಿರೂಪಾ ಮಹೇಶ್ ಎಸ್ಕೇಪ್ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದೀಗ ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತಾ ಪ್ರಕರಣವನ್ನು ಸಿಬಿಐಗೆ ವಹಿಸಿ ಆದೇಶ ಹೊರಡಿಸಿದ್ದಾರೆ
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.