ಬೆಂಗಳೂರು: ಇತ್ತೀಚೆಗೆ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ನಟಿ ಸವಿ ಮಾದಪ್ಪ ಸಾವಿನ ಸತ್ಯ ಬಯಲಾಗಿದೆ.
									
										
								
																	
ಅವರ ಮರಣೋತ್ತರ ಪರೀಕ್ಷಾ ವರದಿ ಪೊಲೀಸರ ಕೈ ಸೇರಿದೆ. ಇದರಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಖಚಿತವಾಗಿದೆ.
									
			
			 
 			
 
 			
			                     
							
							
			        							
								
																	ಸವಿ ಮಾದಪ್ಪ ಸಾವು ಸಹಜವಲ್ಲ ಎಂದು ಅವರ ತಂದೆ ಪೊಲೀಸರಿಗೆ ದೂರು ನೀಡಿದ್ದರು. ಹೀಗಾಗಿ ಅವರ ಗೆಳೆಯ ವಿವೇಕ್, ಆಪ್ತರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದರು. ಸಾಯುವ ಮೊದಲು ಬರೆದಿದ್ದ ಡೆತ್ ನೋಟ್ ನಲ್ಲಿ ಸವಿ ಮಾದಪ್ಪ ತನ್ನ ಸಾವಿಗೆ ತಾವೇ ಕಾರಣ ಎಂದು ಬರೆದುಕೊಂಡಿದ್ದರು.