ಹಾಸನ: ಹೈದರಾಬಾದ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ನಟಿ ಶೋಭಿತಾ ಶಿವಣ್ಣ ಮೃತದೇಹವನ್ನ ಹುಟ್ಟೂರಾದ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆರೂರು ಗ್ರಾಮಕ್ಕೆ ತರಲಾಗಿದೆ.
ಶೋಭಿತಾ ನಿವಾಸದೆದುರು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹೆರೂರು ಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ. ಶೋಭಿತಾ ಮೃತದೇಹ ನೋಡುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇಡೀ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.
ಶೋಭಿತಾ ಶಿವಣ್ಣ ಅವರು ಕನ್ನಡದ ಬ್ರಹ್ಮಗಂಟು, ನೀನಾದೆ ನಾ, ಸೇರಿದಂತೆ ಕನ್ನಡ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಶೋಭಿತಾ ಹೈದರಾಬಾದ್‌ನಲ್ಲಿರುವ ಪತಿಯ ನಿವಾಸದಲ್ಲಿ ಸಾವಿಗೆ ಶರಣಾಗಿದ್ದರು. ಸಕಲೇಶಪುರ ಮೂಲದವರಾದ ಶೋಭಿತಾ ಶಿವಣ್ಣ ಮದುವೆ ಬಳಿಕ ಹೈದರಾಬಾದ್‌ಗೆ ಶಿಫ್ಟ್ ಆಗಿದ್ದರು.
ಕಳೆದ ವರ್ಷ ಅಂದರೆ 2023ರ ಮೇ 22ರಂದು ಶೋಭಿತಾ ಶಿವಣ್ಣ ಹೈದರಾಬಾದ್‌ನ ಸಾಫ್ಟ್‌ವೇರ್ ಕಂಪನಿ ಉದ್ಯೋಗಿ ಸುಧೀರ್ ಎನ್ನುವವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೊಂದು ಪಕ್ಕಾ ಅರೇಂಜ್ ಮ್ಯಾರೇಜ್ ಆಗಿದ್ದು, ಅಕ್ಕನ ಗಂಡನ ಸಂಬಂಧಿಕರನ್ನೇ ಶೋಭಿತಾ ಶಿವಣ್ಣ ಮದುವೆಯಾಗಿದ್ದರು ಎನ್ನಲಾಗಿದೆ.