Webdunia - Bharat's app for daily news and videos

Install App

ಕುಟುಂಬಸ್ಥರ ಮುಗಿಲುಮುಟ್ಟಿದ ಆಕ್ರಂದನ ಮಧ್ಯೆ ಸಕಲೇಶಪುರದಲ್ಲಿ ನಟಿ ಶೋಭಿತಾ ಅಂತ್ಯಕ್ರಿಯೆ

Sampriya
ಮಂಗಳವಾರ, 3 ಡಿಸೆಂಬರ್ 2024 (14:39 IST)
Photo Courtesy X
ಹಾಸನ: ಹೈದರಾಬಾದ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ನಟಿ ಶೋಭಿತಾ  ಶಿವಣ್ಣ ಮೃತದೇಹವನ್ನ ಹುಟ್ಟೂರಾದ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆರೂರು ಗ್ರಾಮಕ್ಕೆ ತರಲಾಗಿದೆ.

ಶೋಭಿತಾ ನಿವಾಸದೆದುರು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹೆರೂರು ಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ. ಶೋಭಿತಾ ಮೃತದೇಹ ನೋಡುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇಡೀ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

ಶೋಭಿತಾ ಶಿವಣ್ಣ ಅವರು ಕನ್ನಡದ ಬ್ರಹ್ಮಗಂಟು, ನೀನಾದೆ ನಾ, ಸೇರಿದಂತೆ ಕನ್ನಡ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಶೋಭಿತಾ ಹೈದರಾಬಾದ್‌ನಲ್ಲಿರುವ ಪತಿಯ ನಿವಾಸದಲ್ಲಿ ಸಾವಿಗೆ ಶರಣಾಗಿದ್ದರು. ಸಕಲೇಶಪುರ ಮೂಲದವರಾದ ಶೋಭಿತಾ ಶಿವಣ್ಣ ಮದುವೆ ಬಳಿಕ ಹೈದರಾಬಾದ್‌ಗೆ ಶಿಫ್ಟ್‌ ಆಗಿದ್ದರು.

ಕಳೆದ ವರ್ಷ ಅಂದರೆ 2023ರ ಮೇ 22ರಂದು ಶೋಭಿತಾ ಶಿವಣ್ಣ ಹೈದರಾಬಾದ್‌ನ ಸಾಫ್ಟ್‌ವೇರ್ ಕಂಪನಿ ಉದ್ಯೋಗಿ ಸುಧೀರ್ ಎನ್ನುವವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೊಂದು ಪಕ್ಕಾ ಅರೇಂಜ್‌ ಮ್ಯಾರೇಜ್‌ ಆಗಿದ್ದು, ಅಕ್ಕನ ಗಂಡನ ಸಂಬಂಧಿಕರನ್ನೇ ಶೋಭಿತಾ ಶಿವಣ್ಣ ಮದುವೆಯಾಗಿದ್ದರು ಎನ್ನಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments