Select Your Language

Notifications

webdunia
webdunia
webdunia
webdunia

ನಟಿಯರಾದ ರಾಗಿಣಿ ದ್ವಿವೇದಿ, ಶುಭ ಪೂಂಜಾಗೂ ರೇಣುಕಾಸ್ವಾಮಿ ಅಶ್ಲೀಲ ಸಂದೇಶ

Renukaswamy Case

Sampriya

ಬೆಂಗಳೂರು , ಸೋಮವಾರ, 9 ಸೆಪ್ಟಂಬರ್ 2024 (19:45 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ  ಸಂಬಂಧ ಆರೋಪಿಗಳ ವಿರುದ್ಧದ ನ್ಯಾಯಾಲಯಕ್ಕೆ ಸಲ್ಲಿಕೆಯಾದ ಚಾರ್ಜ್‌ಶೀಟ್‌ನಲ್ಲಿ ಹಲವು ಪ್ರಶ್ನೆಗಳಿಗೆ ಉತ್ತರ ಸಿಗುತ್ತಿದೆ.

ಆಪ್ತೆ ಪವಿತ್ರಾಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಎಂದು ಡಿ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಕನ್ನಡದ ಸ್ಟಾರ್‌ ನಟಿಯರಿಗೂ ಅಶ್ಲೀಲವಾಗಿ ಮೆಸೇಜ್ ಕಳುಹಿಸಿರುವುದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿದೆ.

ಕನ್ನಡದ ಹೆಸರಾಂತ ನಟಿಯರಾದ ರಾಗಿಣಿ ದ್ವಿವೇದಿ, ಶುಭಾ ಪೂಂಜಾ ಸೇರಿದಂತೆ ಅನೇಕ ನಟಿಯರಿಗೆ ರೇಣುಕಾಸ್ವಾಮಿ ತನ್ನ ನಕಲಿ ಅಕೌಂಟ್‌ನಿಂದ ಅಶ್ಲೀಲ ಮೆಸೇಜ್ ಕಳುಹಿಸಿರುವುದು ತಿಳಿದುಬಂದಿದೆ. ಈ ಬಗ್ಗೆ ಹತ್ಯೆ ಆರೋಪಿಗಳಾದ ಪ್ರದೋಶ್ ಮತ್ತು ವಿನಯ್‍ ನೀಡಿರುವ ಹೇಳಿಕೆಯಲ್ಲಿ ಇದು ಉಲ್ಲೇಖವಾಗಿದೆ.  ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಮಾತ್ರವಲ್ಲದೆ ಕನ್ನಡ ಇನ್ನೂ ಹಲವು ನಟಿಯರಿಗೆ ಮೆಸೇಜ್ ಕಳುಹಿಸಿರುವುದು ನೋಡಿದ್ದೇವೆ ಎಂದಿದ್ದಾರೆ.

ಇದೀಗ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ 3991ಪುಟಗಳ ಚಾರ್ಜ್‌ಶೀಟ್‌ನಲ್ಲಿ ಆರೋಪಿಗಳ ಹೇಳಿಕೆಗಳು ದಾಖಲಾಗಿದೆ. ಪ್ರಕರಣ ಸಂಬಂಧ ಇಂಚಿಂಚು ಮಾಹಿತಿಗಳು ಹೊರಬೀಳುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಾರ್ಜ್‌ಶೀಟ್‌ನಲ್ಲಿ ದರ್ಶನ್ ಜತೆಗಿನ ಪವಿತ್ರಾ ಗೌಡ ಪರಿಚಯ, ಸ್ನೇಹ, ಪ್ರೀತಿ ಬಗ್ಗೆ ಇಂಚಿಂಚು ಮಾಹಿತಿ