Webdunia - Bharat's app for daily news and videos

Install App

ಬೇಬಿ ಬಂಪ್ ಫೋಟೋ ಶೂಟ್ ಗೂ ಮೈ ತುಂಬಾ ಸೀರೆ ಉಟ್ಟುಕೊಂಡ ಕನ್ನಡತಿ ಅದಿತಿ ಪ್ರಭುದೇವ

Krishnaveni K
ಬುಧವಾರ, 27 ಮಾರ್ಚ್ 2024 (11:55 IST)
Photo Courtesy: Instagram
ಬೆಂಗಳೂರು: ಅಪ್ಪಟ ಕನ್ನಡ ನಟಿ, ಅದಿತಿ ಪ್ರಭುದೇವ ಈಗ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಇತ್ತೀಚೆಗಷ್ಟೇ ಅವರು ತಾವು ಗರ್ಭಿಣಿ ಎನ್ನುವ ವಿಚಾರವನ್ನು ಹೊರಹಾಕಿದ್ದರು.

ಇದೀಗ ಅದಿತಿ ಕೊನೆಗೂ ತನ್ನ ಬಯಕೆ ಈಡೇರಿದೆ ಎಂದು ಪತಿ ಜೊತೆಗಿನ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಅದಿತಿ ಸೀಮಂತ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತ್ತು. ಇದಕ್ಕೆ ಸಿನಿ ಸ್ನೇಹಿತರೂ ಆಗಮಿಸಿದ್ದರು.

ಇದೀಗ ಅದಿತಿ ಬೇಬಿ ಬಂಪ್ ಜೊತೆ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ. ಇದು ಅವರ ಬಹುದಿನದ ಆಸೆಯಾಗಿತ್ತಂತೆ. ಅದನ್ನೀಗ ಗಂಡ ಯಶಸ್ ನೆರವೇರಿಸಿದ್ದಾರೆ. ಗಂಡನ ಜೊತೆಗೆ ಹೊಟ್ಟೆಯಲ್ಲಿ ಮುದ್ದು ಮಗುವನ್ನು ಹೊತ್ತುಕೊಂಡು ಅದಿತಿ ಸಾಂಪ್ರದಾಯಿಕವಾಗಿ ಸೀರೆ ಉಟ್ಟುಕೊಂಡು ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ. ಸಾಮಾನ್ಯವಾಗಿ ನಟಿಮಣಿಯರು ಮಾಡರ್ನ್ ಡ್ರೆಸ್ ನಲ್ಲಿ ಫೋಟೋ ಶೂಟ್ ಮಾಡಿಸಿಕೊಳ್ಳುತ್ತಾರೆ. ಆದರೆ ಅದಿತಿ ಪಕ್ಕಾ ಕನ್ನಡದ ಹುಡುಗಿಯಂತೆ ಸೀರೆ ಉಟ್ಟುಕೊಂಡು ಫೋಟೋ ಶೂಟ್ ಮಾಡಿಸಿದ್ದಾರೆ.

2022 ರಲ್ಲಿ ಅದಿತಿ ಮತ್ತು ಉದ್ಯಮಿ ಯಶಸ್ ಪಾಟ್ಲಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇವರದ್ದು ಒಂದು ರೀತಿಯಲ್ಲಿ ಅರೇಂಜ್ಡ್ ಕಮ್ ಲವ್ ಮ್ಯಾರೇಜ್. ಇದೀಗ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಜನವರಿಯಲ್ಲಿ  ಈ ಸಿಹಿ ಸುದ್ದಿಯನ್ನು ಅದಿತಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments