ಆದಿತ್ಯ ಶಶಿಕುಮಾರ್ ಅಭಿನಯದ ಚೊಚ್ಚಲ ಸಿನಿಮಾ ಕಾದಾಡಿ ಚಿತ್ರದ ಹಾಡು ರಿಲೀಸ್‌

sampriya
ಬುಧವಾರ, 29 ಮೇ 2024 (17:43 IST)
Photo By X
ಬೆಂಗಳೂರು: ಹಿರಿಯ ನಟ ಶಶಿಕುಮಾರ್ ಪುತ್ರ ಆದಿತ್ಯ ಶಶಿಕುಮಾರ್ ಅಭಿನಯದ ಬಹುನಿರೀಕ್ಷಿತ ಕಾದಾಡಿ ಚಿತ್ರ ಬಿಡುಗಡೆಗೆ ಸಿದ್ಧವಾಗುತ್ತಿದೆ. ಬಹುಭಾಷೆಯಲ್ಲಿ ತೆರೆಗೆ ಬರಲಿರುವ ಈ ಚಿತ್ರದ ನಾಯಕನನ್ನು ಪರಿಚಯಿಸುವ ಎರಡನೇ ಲಿರಿಕಲ್‌ ವಿಡಿಯೊ ಹಾಡನ್ನು ಬಿಡುಗಡೆ ಮಾಡಲಾಗಿದೆ.

ಅಕ್ಷಿತ್ ಶಶಿಕುಮಾರ್ ಈಗ ಆದಿತ್ಯ ಶಶಿಕುಮಾರ್ ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ. ಅವರು ನಾಯಕನಟನಾಗಿ ಚೊಚ್ಚಲವಾಗಿ ಅಭಿನಯಿಸಿರುವ ಕಾದಾಡಿ ಚಿತ್ರವು ಕನ್ನಡ, ತೆಲುಗು, ಹಿಂದಿ ಮತ್ತು ತಮಿಳು ಭಾಷೆಯಲ್ಲಿ ಸಿದ್ದಗೊಳ್ಳುತ್ತಿವೆ. ಈ ಸಿನಿಮಾವನ್ನು ಸತೀಶ್ ಮಾಲೆಂಪಾಟಿ ನಿರ್ದೇಶಿಸಿ, ಅರುಣಂ ಫಿಲಿಂಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ.  

ಕಲೆಯು ಇರಬೇಕು, ಮನೆಯು ಇರಬೇಕುʼ ಹಾಡಿಗೆ ಶಶಾಂಕ್ ಶೇಷಗಿರಿ ಧ್ವನಿಯಾಗಿದ್ದಾರೆ. ಎನ್.ಮಾರುತಿ ಸಾಹಿತ್ಯ ನೀಡಿದ್ದಾರೆ. ನಮ್ಮ ಜೀವನವನ್ನು ತ್ಯಾಗ ಮಾಡುವ ಮೂಲಕ ಸಮಾಜಕ್ಕೆ ಏನನ್ನಾದರೂ ಕೊಡಬೇಕು. ಇಂತಹ ಅಂಶಗಳನ್ನು ಥ್ರಿಲ್ಲರ್ ಮೂಲಕ ತೋರಿಸುವ ಪ್ರಯತ್ನ ಹಾಡಿನ ಮೂಲಕ ಮಾಡಿರುವುದು ಗೊತ್ತಾಗುತ್ತದೆ.

ಆದಿತ್ಯಗೆ ಲಾವಣ್ಯ ಸಾಹುಕಾರ, ಚಾಂದಿನಿ ತಮಿಳರಸನ್ ಚಿತ್ರದಲ್ಲಿ ಜೋಡಿಯಾಗಿದ್ದಾರೆ. ಉಳಿದಂತೆ ಪೋಸಾನಿ, ರವಿಕಾಳೆ, ಮಾರಿಮುತ್ತು, ಪ್ರೇಮ್‌ಮನೋಹರ್, ಶ್ರವಣ್‌ರಾಘವೇಂದ್ರ ಮುಂತಾದವರು ನಟಿಸಿದ್ದಾರೆ. ಆರು ಹಾಡುಗಳಿಗೆ ಭೀಮ್ಸ್ ಸಿಸಿರಿಲಿಯೋ ಸಂಗೀತ ಸಂಯೋಜಿಸಿದ್ದಾರೆ. ಡಿ.ಯೋಗಿಪ್ರಸಾದ್ ಛಾಯಾಗ್ರಹಣ ಡಿ.ಯೋಗಿಪ್ರಸಾದ್, ಕಲೆ ಅರ್ಜುನ್‌ ಸೂರಿ ಸೆಟ್ಟಿ, ಪ್ರಕಾಶ್‌ತೋಟ ಸಂಕಲನ, ನೃತ್ಯ ರಾಜ್‌ಪಿಡಿ-ರಾಜ್‌ಕೃಷ್ಣ, ಸಾಹಸ ಸಿನಿಮಾಕ್ಕಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

ಮುಂದಿನ ಸುದ್ದಿ
Show comments