Webdunia - Bharat's app for daily news and videos

Install App

ಜಾಮೀನು ಪ್ರಕ್ರಿಯೆ ಮುಗಿಸಿ, ಆಸ್ಪತ್ರೆಗೆ ವಾಪಾಸ್ಸಾದ ನಟ ದರ್ಶನ್‌

Sampriya
ಸೋಮವಾರ, 16 ಡಿಸೆಂಬರ್ 2024 (17:18 IST)
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ನಟ ದರ್ಶನ್ ಸೋಮವಾರ ಸೆಷನ್ಸ್ ಕೋರ್ಟ್ ಮುಂದೆ ಹಾಜರಾಗಿ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿ, ವಾಪಾಸ್ ಬಿಜಿಎಸ್ ಆಸ್ಪತ್ರೆಗೆ ಬಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಅವರು ಆಸ್ಪತ್ರೆಯಿಂದ ಹೊರಬಂದು ಕಾರು ಹತ್ತಿರುವ ವಿಡಿಯೋ ವೈರಲ್ ಆಗಿತ್ತು. ಇದನ್ನು ನೋಡಿ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರೂ ಎಂಬ ಸುದ್ದಿ ಹರಿದಾಡಿತ್ತು. ಆದರೆ ದರ್ಶನ್ ಜಾಮೀನು ಪ್ರಕ್ರಿಯೆ ನಡೆಸಲು ಆಸ್ಪತ್ರೆಯಿಂದ ನೇರವಾಗಿ ಸೆಷನ್ಸ್ ಕೋರ್ಟ್ ಮುಂದೆ ಹಾಜರಾದರು. ಇನ್ನೂ ದರ್ಶನ್ ಜಾಮೀನಿಗೆ ಸ್ನೇಹಿತ, ನಟ ಧನ್ವೀರ್ ಮತ್ತು ಸಹೋದರ ದಿನಕರ್ ಶ್ಯೂರಿಟಿ ನೀಡಿದರು.

ಶ್ಯೂರಿಟಿ ವೇಳೆ, ದರ್ಶನ್ ನಿಮಗೆ ಏನಾಗಬೇಕು ಎಂದು ಜಡ್ಜ್ ಕೇಳಿದರು. ಅದಕ್ಕೆ, ಸ್ನೇಹಿತ ಮತ್ತು ಸಹೋದರ ಎಂದು ಧನ್ವೀರ್ ಮತ್ತು ದಿನಕರ್ ಹೇಳಿದರು. ಕೊನೆಗೆ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿ ದರ್ಶನ್ ಮತ್ತೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ವಾಪಾಸ್ಸಾಗಿದ್ದಾರೆ.

ಇನ್ನೂ ಕೋರ್ಟ್‌ನಲ್ಲಿಯೂ ನಟ ದರ್ಶನ್ ಅವರು ಅನಾರೋಗ್ಯ ಸಮಸ್ಯೆಯನ್ನು ತೋರಿಸಿದರು. ಕುಂಟುತ್ತಲೇ ಕೋರ್ಟ್‌ಗೆ ಆಗಮಿಸಿದ ದರ್ಶನ್‌ಗೆ ಒಳಗೆ ನಿಲ್ಲಲು ಪರದಾಡಿದರು.  ಕೋರ್ಟ್ ಹೊರಭಾಗದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. ಜನ ಸೇರದಂತೆ ಸಿಟಿ ಸಿವಿಲ್ ಕೋರ್ಟ್ ಹೊರಭಾಗದಲ್ಲಿ ಪೊಲೀಸರ ಭದ್ರತೆ ವ್ಯವಸ್ಥೆ ಮಾಡಲಾಗಿತ್ತು. ಇದನ್ನೂ ಓದಿ: ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಗೌಡ ರಿಲೀಸ್

ದರ್ಶನ್‌ಗೆ ಬುಧವಾರದವರೆಗೂ ಚಿಕಿತ್ಸೆ ಮುಂದುವರಿಯುವ ಸಾಧ್ಯತೆ ಇದೆ. ಬಹುತೇಕ ಗುರುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬಹುದು ಎಂದು ಹೇಳಲಾಗಿದೆ. ವೈದ್ಯರ ಸಲಹೆ ಪಡೆದು ನಂತರ ದರ್ಶನ್ ಡಿಸ್ಚಾರ್ಜ್ ಆಗಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments