Select Your Language

Notifications

webdunia
webdunia
webdunia
webdunia

ಮತ್ತೆ ಪಾರ್ವತಮ್ಮ ರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು

ಮತ್ತೆ ಪಾರ್ವತಮ್ಮ ರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು
Bangalore , ಮಂಗಳವಾರ, 16 ಮೇ 2017 (11:38 IST)
ಬೆಂಗಳೂರು: ವರನಟ ರಾಜ್ ಕುಮಾರ್ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ನಗರದ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

 
ಸ್ವತಃ ಪುತ್ರ ಪುನೀತ್ ರಾಜ್ ಕುಮಾರ್ ಅಮ್ಮನ ಬಳಿಯಿದ್ದು, ಯೋಗ ಕ್ಷೇಮ ನೋಡಿಕೊಳ್ಳುತ್ತಿದ್ದಾರೆ. ಈ ನಡುವೆ ಇಂದು ಬೆಳಿಗ್ಗೆ ಸಿಎಂ ಸಿದ್ಧರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಪಾರ್ವತಮ್ಮ ಆರೋಗ್ಯ ವಿಚಾರಿಸಿದರು.

ಪ್ರತೀ ತಿಂಗಳೂ ಕೂಡಾ ಪಾರ್ವತಮ್ಮ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ಅದೇ ರೀತಿ ಇಂದೂ ಕೂಡಾ ಆರೋಗ್ಯ ತಪಾಸಣೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಕಳೆದ ತಿಂಗಳಷ್ಟೇ ಅನಾಯಾಸದಿಂದಾಗಿ ಪಾರ್ವತಮ್ಮನವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

ಶಾಕಿಂಗ್! ಮಿ.ಪರ್ಫೆಕ್ಟ್ ಖಾನ್ ವೈವಾಹಿಕ ಜೀವನದಲ್ಲಿ ಬಿರುಕು?!