Publish Date: Sat, 18 Mar 2023 (11:32 IST)
Updated Date: Sat, 18 Mar 2023 (11:43 IST)
ಬೆಂಗಳೂರಿನ ರೇಸ್ಕೋರ್ಸ್ ರಸ್ತೆಗೆ ನಟ ಅಂಬರೀಶ್ ಹೆಸರನ್ನಿಡಲು BBMP ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅನುಮೋದನೆ ನೀಡಿದ್ದಾರೆ. ರೇಸ್ಕೋರ್ಸ್ ರಸ್ತೆಯ ರಾಮ್ ನಾರಾಯಣ್ ಚೆಲ್ಲಾರಾಂ ಕಾಲೇಜಿನಿಂದ ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದವರೆಗಿನ ರಸ್ತೆಗೆ ಅಂಬರೀಶ್ ರಸ್ತೆ ಎಂದು ನಾಮಕರಣ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕ್ರಮದಲ್ಲಿ ಘೋಷಿಸಿದ್ದರು. ಈ ಪ್ರಸ್ತಾವನೆಯನ್ನು ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರಿಗೆ ಪೂರ್ವ ವಲಯದ ಜಂಟಿ ಆಯುಕ್ತರು ಕಳುಹಿಸಿದ್ದರು. ತುರ್ತಾಗಿ ನಾಮಕರಣ ಮಾಡುವುದು ಅವಶ್ಯವಾಗಿರುವುದರಿಂದ, BBMP ಕಾಯ್ದೆಯಂತೆ ಅನುಮೋದನೆ ನೀಡಬೇಕೆಂದು ಕೋರಿದ್ದರು. ಮಾರ್ಚ್ 14ರಂದು ಪೂರ್ವ ವಲಯದ ಆಯುಕ್ತರು ಟಿಪ್ಪಣಿಯನ್ನು ಆಡಳಿತಾಧಿಕಾರಿಯವರ ಮುಂದಿರಿಸಿದ್ದರು. ರೇಸ್ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡುವ ಕಾರ್ಯಕ್ರಮ ವಾರದಲ್ಲೇ ನಡೆಯಲಿದೆ ಎಂದು BBMP ಮೂಲಗಳು ತಿಳಿಸಿವೆ.