Publish Date: Mon, 08 Apr 2024 (15:49 IST)
Updated Date: Wed, 10 Apr 2024 (15:20 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಪುತ್ರಿ ಐಶ್ವರ್ಯಾ ರಜನೀಕಾಂತ್ ಮತ್ತು ನಟ ಧನುಷ್ ಇದೀಗ ಕಾನೂನಾತ್ಮಕವಾಗಿ ದೂರವಾಗುವ ಉದ್ದೇಶದಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಧನುಷ್ ಮತ್ತು ಐಶ್ವರ್ಯಾ ದಂಪತಿ ಕಳೆದ ವರ್ಷವೇ ತಾವಿಬ್ಬರೂ ದೂರವಾಗುತ್ತಿರುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದರು. ಆದರೆ ಇದುವರೆಗೆ ಇಬ್ಬರೂ ಕೋರ್ಟ್ ನಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರಲಿಲ್ಲ. ಇದೀಗ ದಂಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ತಮ್ಮ ದಾಂಪತ್ಯ ವಿರಸಕ್ಕೆ ಕಾನೂನಾತ್ಮಕವಾಗಿಯೇ ಮುದ್ರೆ ಒತ್ತಲು ದಂಪತಿ ಕೋರ್ಟ್ ಮೊರೆ ಹೋಗಿದ್ದಾರೆ. ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ಸೆಕ್ಷನ್ 13-ಬಿ ಪ್ರಕಾರ ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ ಪಡೆಯಲು ಬಯಸುವುದಾಗಿ ಅರ್ಜಿ ಸಲ್ಲಿಸಿದ್ದಾರೆ.
2004 ರಲ್ಲಿ ಧನುಷ್ ಮತ್ತು ಐಶ್ವರ್ಯಾ ಪ್ರೀತಿಸಿ ಮನೆಯವರ ಸಮ್ಮುಖದಲ್ಲಿ ಮದುವೆಯಾಗಿದ್ದರು. ಕಳೆದ ಒಂದು ವರ್ಷದಿಂದ ಇಬ್ಬರ ಸಂಬಂಧ ಹಳಸಿತ್ತು. ಇಬ್ಬರಿಗೂ ಈಗ ಇಬ್ಬರು ಮಕ್ಕಳಿದ್ದಾರೆ.