ನಟ ಅಜೇಯ ರಾವ್, ಪತ್ನಿ ನಡುವೆ ಅಂತಹದ್ದೇನಾಯ್ತು

Krishnaveni K
ಶನಿವಾರ, 16 ಆಗಸ್ಟ್ 2025 (15:12 IST)
Photo Credit: Instagram
ಬೆಂಗಳೂರು: ಸ್ಯಾಂಡಲ್ ವುಡ್ ನಟ ಅಜೇಯ ರಾವ್ ದಾಂಪತ್ಯದಲ್ಲಿ ಬಿರುಕು ಕಂಡುಬಂದಿದೆ. ಅಜೇಯ ರಾವ್- ಸಪ್ನಾ ದೂರವಾಗುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಕನ್ನಡ ಚಿತ್ರರಂಗದಲ್ಲಿ ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದ ಅಜೇಯ್ ರಾವ್-ಸಪ್ನಾ 11 ವರ್ಷಗಳ ದಾಂಪತ್ಯಕ್ಕೆ ಗುಡ್ ಬೈ ಹೇಳುತ್ತಿದ್ದಾರೆ ಎನ್ನಲಾಗಿದೆ.  ಸಪ್ನಾ ಸಿನಿಮಾ ಹಿನ್ನಲೆಯವರಲ್ಲ. ಇಬ್ಬರಿಗೂ ಒಬ್ಬ ಪುತ್ರಿಯಿದ್ದಾಳೆ.

ಕೆಲವು ದಿನಗಳ ಹಿಂದಷ್ಟೇ ಯೂಟ್ಯೂಬ್ ಚಾನೆಲ್ ಒಂದಕ್ಕೆ ಇಬ್ಬರೂ ಜೊತೆಯಾಗಿ ಸಂದರ್ಶನವೊಂದನ್ನು ನೀಡಿದ್ದರು. ಇಲ್ಲಿ ಇಬ್ಬರೂ ತಮ್ಮಿಬ್ಬರ ನಡುವಿನ ಲವ್ ಸ್ಟೋರಿಯನ್ನು ಮುಕ್ತವಾಗಿ ಮಾತನಾಡಿದ್ದರು. ಆದರೆ ಈಗ ವಿಚ್ಛೇದನಕ್ಕೊಳಗಾಗುತ್ತಿರುವ ಆಘಾತಕಾರಿ ಸುದ್ದಿ ಕೇಳಿಬಂದಿದೆ. ಅಷ್ಟು ಚೆನ್ನಾಗಿದ್ದ ದಂಪತಿ ಈಗ ಏನಾಯ್ತು ಎಂದು ಎಲ್ಲರಿಗೂ ಅಚ್ಚರಿಯಾಗಿದೆ.

ನಟರಾಗಿದ್ದರೂ ಮನೆಯಲ್ಲಿ ಈಗಲೂ ಪಕ್ಕಾ ಸಾಮಾನ್ಯರಂತೇ ಸರಳವಾಗಿ ಜೀವನ ಮಾಡುತ್ತಿದ್ದ ಜೋಡಿ ಅವರು. ಮೇಡ್ ಫಾರ್ ಈಚ್ ಅದರ್ ಎಂಬತಿದ್ದರು. ಸಪ್ನಾ ಸಿನಿಮಾ ಲೋಕದಿಂದ ದೂರವೇ ಇದ್ದರು. ಆದರೆ ಈಗ ಪತಿಯ ವಿರುದ್ಧ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಕೇವಲ ಮುನಿಸಿಗಿಂತಲೂ ದೊಡ್ಡ ಮಟ್ಟದಲ್ಲಿ ಏನೋ ಆಗಿರಬೇಕು ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಮುಂದಿನ ಸುದ್ದಿ
Show comments