Publish Date: Fri, 24 Mar 2023 (10:40 IST)
Updated Date: Fri, 24 Mar 2023 (10:52 IST)
ಚೆನ್ನೈ: ತಮಿಳು ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಂ ವಯೋಸಹಜ ಖಾಯಿಲೆಯಿಂದ ಮೃತಪಟ್ಟಿದ್ದಾರೆ.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಮೂಲತಃ ಅವರು ಕೇರಳದವರಾಗಿದ್ದರು.
ನಟ ಅಜಿತ್ ಕುಮಾರ್ ಸೇರಿದಂತೆ ಮೂವರು ಮಕ್ಕಳನ್ನು ಅಗಲಿದ್ದಾರೆ. ಇಂದು ಸಂಜೆ ಸುಬ್ರಮಣಿಯಂ ಅಂತ್ಯ ಕ್ರಿಯೆ ನೆರವೇರಲಿದೆ. ಅಜಿತ್ ಕುಟುಂಬಕ್ಕೆ ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.