Webdunia - Bharat's app for daily news and videos

Install App

ಲೈಂಗಿಕ ದೌರ್ಜನ್ಯ ಆರೋಪ: ಖ್ಯಾತ ಕಿರುತೆರೆ ನಟ ಚರಿತ್ ಬಾಳಪ್ಪ ಅರೆಸ್ಟ್‌

Sampriya
ಶುಕ್ರವಾರ, 27 ಡಿಸೆಂಬರ್ 2024 (16:21 IST)
Photo Courtesy X
ಬೆಂಗಳೂರು: ಗೆಳತಿಯ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ ಆರೋಪದಡಿ ಖ್ಯಾತ ಕಿರುತೆರೆ ನಟ ಚರಿತ್ ಬಾಳಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇವರು ಕನ್ನಡದಲ್ಲಿ ಮುದ್ದುಲಕ್ಷ್ಮಿ, ಲವಲವಿಕೆ, ಸರ್ಪಸಂಬಂಧ ಸೇರಿದಂತೆ ತೆಲುಗಿನ ಅನೇಕ ಧಾರಾವಾಹಿಗಳಲ್ಲಿ ನಟಿಸಿ ಚರಿತ್ ಬಾಳಪ್ಪ ಖ್ಯಾತಿ ಪಡೆದಿದ್ದರು.

ಆರ್‌ಆರ್‌ ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾದ ದೂರಿನ ಅನ್ವಯ ಇದೀಗ ಚರಿತ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೂರಿನಲ್ಲಿ ಏನಿದೆ: ನಿನ್ನನ್ನ ಪ್ರೀತಿಸುತ್ತೇನೆ ಎಂದು ಹೇಳಿ ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿದ್ದಾನೆ. ಜೊತೆಗೆ ಯುವತಿ ವಾಸ ಮಾಡುತ್ತಿದ್ದ ಮನೆಗೆ ನುಗ್ಗಿ ಸಹಚರರ ಜೊತೆ ಕಿರುಕುಳ ನೀಡಿದ್ದಾನೆ. ಹಣಕ್ಕೂ ಬೇಡಿಕೆಯಿಟ್ಟಿದ್ದು, ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವೀಡಿಯೋ ಹರಿಬಿಡುವ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.

ಮದುವೆಯಾಗಿದ್ದ ನಟ ಚರಿತ್ ಹಾಗೂ ಪತ್ನಿ ಮಂಜುಶ್ರೀ ಡಿವೋರ್ಸ್ ಪಡೆದಿದ್ದರು. ಕೋರ್ಟ್ ಆಜ್ಞೆಯಂತೆ ಡಿವೋರ್ಸ್ ಪರಿಹಾರ ಹಣಕ್ಕೆ ನೋಟಿಸ್ ಕಳಿಸಿದ್ದಕ್ಕೆ ಬೆದರಿಕೆ ಹಾಕಿದ್ದಾರೆಂದು ಚರಿತ್ ವಿರುದ್ಧ ಪತ್ನಿ ಮಂಜುಶ್ರೀ ದೂರು ನೀಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಕಳೆದ ಜೂನ್ ತಿಂಗಳಲ್ಲಿ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಕನ್ನಡದ ಖ್ಯಾತ ನಿರೂಪಕಿ ಮದುವೆ ಡೇಟ್ ಫಿಕ್ಸ್‌, ಮದುವೆ ಎಲ್ಲಿ ಗೊತ್ತಾ

ಮುಂದಿನ ಸುದ್ದಿ