Select Your Language

Notifications

webdunia
webdunia
webdunia
webdunia

ಅಲ್ಲು ಅರ್ಜುನ್ ಬರ್ತ್ ಡೇ: ರಶ್ಮಿಕಾ ಮಂದಣ್ಣ ಜತೆಗಿನ ಹೊಸ ಸಿನಿಮಾ ಪೋಸ್ಟರ್ ಲಾಂಚ್

ಅಲ್ಲು ಅರ್ಜುನ್ ಬರ್ತ್ ಡೇ: ರಶ್ಮಿಕಾ ಮಂದಣ್ಣ ಜತೆಗಿನ ಹೊಸ ಸಿನಿಮಾ ಪೋಸ್ಟರ್ ಲಾಂಚ್
ಹೈದರಾಬಾದ್ , ಬುಧವಾರ, 8 ಏಪ್ರಿಲ್ 2020 (11:33 IST)
ಹೈದರಾಬಾದ್: ತೆಲುಗು ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಜನ್ಮದಿನವಾದ ಇಂದು ‘ಪುಷ್ಪ’ ಸಿನಿಮಾದ ಪೋಸ್ಟರ್ ಲಾಂಚ್ ಆಗಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್ ಗೆ ನಾಯಕಿಯಾಗಿ ಕನ್ನಡದ ಬೆಡಗಿ ರಶ್ಮಿಕಾ ಮಂದಣ್ಣ ಅಭಿನಯಿಸುತ್ತಿದ್ದಾರೆ.


ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಪುಷ್ಪ ಸಿನಿಮಾವನ್ನು ಸುಕುಮಾರ್ ನಿರ್ದೇಶಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ರಶ್ಮಿಕಾ ಅಲ್ಲು ಅರ್ಜುನ್ ಗೆ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

ಈ ಸಿನಿಮಾವನ್ನು ತೆಲುಗು ಮಾತ್ರವಲ್ಲದೆ, ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆ ಮಾಡುವ ಯೋಜನೆ ಚಿತ್ರ ತಂಡದ್ದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅನ್ನ ನೀಡುತ್ತಿರುವ ಅಭಿಮಾನಿಗಳಿಗೆ ಶಿವರಾಜ್ ಕುಮಾರ್ ಧನ್ಯವಾದ