Select Your Language

Notifications

webdunia
webdunia
webdunia
webdunia

ಅಲ್ಲು ಅರ್ಜುನ್‌ ಎಡವಟ್ಟಿನಿಂದ ಸಿಎಂ ಮುಂದೆ ಟಾಲಿವುಡ್ ಕೈಮುಗಿದು ನಿಲ್ಲುವಂತಾಗಿದೆ: ತಮ್ಮಾರೆಡ್ಡಿ

Tollywood actor Allu Arjan

Sampriya

ಹೈದರಾಬಾದ್‌ , ಶನಿವಾರ, 28 ಡಿಸೆಂಬರ್ 2024 (14:09 IST)
ಹೈದರಾಬಾದ್‌: ಟಾಲಿವುಡ್‌ ನಟ ಅಲ್ಲು ಅರ್ಜನ್ ಮಾಡಿದ ಎಡವಟ್ಟಿನಿಂದಾಗಿ  ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮುಂದೆ ಇಂದು ಟಾಲಿವುಡ್ ಕೈಮುಗಿದು ನಿಲ್ಲುವಂತಾಗಿದೆ ಎಂದು ತೆಲುಗು ನಿರ್ಮಾಪಕ, ನಿರ್ದೇಶಕ ತಮ್ಮಾರೆಡ್ಡಿ ಭಾರದ್ವಾಜ್ ಬೇಸರ ಹೊರಹಾಕಿದ್ದಾರೆ.

ಮೂರು ವಾರಗಳ ಹಿಂದೆ ಪುಷ್ಪ 2  ಪ್ರೀಮಿಯರ್‌ ಶೋ ವೇಳೆ ಹೈದರಾಬಾದ್ ಸಂಧ್ಯಾ ಚಿತ್ರಮಂದಿರದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಬಗ್ಗೆ ಹಾಗೂ ಅಲ್ಲು ಅರ್ಜುನ್ ಅವರ ಮೇಲೆ ಕೇಸ್ ಹಾಕಿರುವ ಬಗ್ಗೆ ಖಾಸಗಿ ಸುದ್ದಿವಾಹಿನಿಗಳ ಜೊತೆ ಮಾತನಾಡಿರುವ ತಮ್ಮಾರೆಡ್ಡಿ, ಒಬ್ಬ ಸ್ಟಾರ್ ಆದವನು ಸಾರ್ವಜನಿಕವಾಗಿ ಹೇಗೆ ಇರಬೇಕೊ ಹಾಗೆ ಅಲ್ಲು ಇರಲಿಲ್ಲ. ಹಾಗಾಗಿ ಇಂದು ಟಾಲಿವುಡ್‌ಗೆ ಈ ಪರಿಸ್ಥಿತಿ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಿಂಗಲ್ ಸ್ಕ್ರೀನ್ ಥಿಯೇಟರ್‌ಗಳಲ್ಲಿ ಸಿನಿಮಾ ಬಿಡುಗಡೆಯಾದ ದಿನ ತಾನೂ ಸಿನಿಮಾ ನೋಡಲು ಹೋದರೆ ಜನಸಾಮಾನ್ಯರು ಜಮಾಯಿಸಿ ಎಡವಟ್ಟಾಗುತ್ತವೆ ಎಂದು ಗೊತ್ತಿದ್ದರೂ ಅಲ್ಲು ಅರ್ಜನ್ ಅಲ್ಲಿ ಹೋಗಿ ತಪ್ಪು ಮಾಡಿದರು ಎಂದು ತೆಲುಗು ಚಲನಚಿತ್ರ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷರೂ ಆದ ಅವರು ಹೇಳಿದರು.

ಚಿರಂಜೀವಿ, ನಾಗಾರ್ಜುನ್ ಸೇರಿದಂತೆ ಅನೇಕ ಹಿರಿಯ ಸ್ಟಾರ್ ನಟರು ಸಾರ್ವಜನಿಕವಾಗಿ ತಾವು ಹೇಗೆ ಇರಬೇಕು ಎಂಬುದು ಅವರಿಗೆ ಗೊತ್ತಿದೆ. ಬಹುನಿರೀಕ್ಷಿತ ಸಿನಿಮಾಗಳು ಬಿಡುಗಡೆಯಾದಾಗ ಮಲ್ಟಿಫ್ಲೆಕ್ಸ್‌ಗಳಿಗೆ ಹೋಗಿ, ಔಪಚಾರಿಕವಾಗಿ ಅಭಿಮಾನಿಗಳನ್ನು ಭೇಟಿಯಾಗಿ ಬರುತ್ತಾರೆ. ಅಲ್ಲು ಕೂಡ ಹಾಗೇ ಮಾಡಬಹುದಿತ್ತು ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗೆಳತಿಗೆ ಲೈಂಗಿಕ ಕಿರುಕುಳ, ಬೆದರಿಕೆ ಆರೋಪಿ: ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಅರೆಸ್ಟ್